ಪ್ರಗತಿವಾಹಿನಿ ಸುದ್ದಿ; ನವದೆಹಲಿ: 100 ಕೋಟಿ ಡೋಸ್ ವ್ಯಾಕ್ಸಿನ್ ನೀಡಿಕೆ ಪೋರ್ಣಗೊಂಡಿದ್ದು, ಇದು ಪ್ರತಿಯೊಬ್ಬ ಭಾರತೀಯನ ಸಾಧನೆಯಾಗಿದೆ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ಗೆದ್ದಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, 100 ಕೋಟಿ ಡೋಸ್ ಲಸಿಕೆ ನೀಡಿಕೆ ದೇಶದ ಸಾಮರ್ಥ್ಯದ ಪ್ರತಿಬಿಂಬ. ಕಠಿಣ ಗುರಿ ಮೂಲಕ ಸಾಧಿಸುವುದು ಭಾರತಕ್ಕೆ ತಿಳಿದಿದೆ. ವ್ಯಾಕ್ಸಿನೇಷನ್ ನಲ್ಲಿ ಜಗತ್ತಿನಲ್ಲಿಯೇ ಭಾರತ 2ನೇ ಸ್ಥಾನದಲ್ಲಿದ್ದೇವೆ. ಲಸಿಕೆ ನೀಡಿಕೆಯಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದರು.
ಮೊದಲು ಭಾರತ ಲಸಿಕೆಗಾಗಿ ಬೇರೆದೇಶವನ್ನು ಅವಲಂಭಿಸಿತ್ತು. ಭಾರತಕ್ಕೆ ಕೋವಿಡ್ ವಿರುದ್ಧದ ಹೋರಾಟ ಸಾಧ್ಯವೇ? 130 ಕೋಟಿ ಜನರಿಗೆ ಲಸಿಕೆ ನೀಡಿಕೆ ಯಾವಾಗ? ಎಂಬ ಹಲವು ಪ್ರಶ್ನೆಗಳು ಉದ್ಭವವಾಗಿದ್ದವು. ಆದರೆ ಇಂದು ಭಾರತವೇ ಲಸಿಕೆ ಕಂಡು ಹಿಡಿದು, ಉತ್ಪಾದಿಸಿ ದೇಶದ ಜನರಿಗೆ ಉಚಿತವಾಗಿ ಲಸಿಕೆ ನೀಡುತ್ತಿದೆ. ಇಡೀ ವಿಶ್ವವೇ ಇಂದು ನಮ್ಮ ಸಾಮರ್ಥ್ಯವನ್ನು ನೋಡುತ್ತಿದೆ. ಈ ಮೂಲಕ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಲಾಗಿದೆ ಎಂದರು.
ದೇಶದಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗಿದೆ. ವ್ಯಾಕ್ಸಿನ್ ನೀಡಿಕೆಯಲ್ಲಿ ವಿವಿಐಪಿ ಸಂಸ್ಕೃತಿ ಇಲ್ಲ. ಬಡವರು, ಶ್ರೀಮಂತರು ಎಲ್ಲರಿಗೂ ಒಂದೇ ರೀತಿಯ ಲಸಿಕೆ ನೀಡಲಾಗಿದೆ. ಮೇಡ್ ಇನ್ ಇಂಡಿಯಾ ಶಕ್ತಿ ದೊಡ್ಡದಾಗಿದೆ. ದೇಶದ ಎಲ್ಲಾ ಕ್ಷೇತ್ರಗಳಲ್ಲೂ ಸಕಾರಾತ್ಮಕ ವಾತಾವರಣ ನಿರ್ಮಾಣವಾಗಿದೆ. ಭಾರತೀಯರೆಲ್ಲರಲ್ಲೂ ಇಂದು ಹೊಸ ಭರವಸೆ ಮೂಡಿದೆ. ಕಳೆದ ವರ್ಷದ ದೀಪಾಳಿಯಲ್ಲಿ ಕೋವಿಡ್ ಕಾರ್ಮೋದವಿತ್ತು. ಆದರೆ ಈವರ್ಷದ ದೀಪಾವಳಿಯಲ್ಲಿ 100 ಕೋಟಿ ಲಸಿಕೆ ನೀಡಿಕೆ ಸಂಭ್ರಮದ ವಾತಾವರಣವಿದೆ ಎಂದು ಹೇಳಿದರು.
ಕಾಲುವೆಗೆ ಉರುಳಿದ ಕಾರು; ನಾಲ್ವರ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ