Latest

*ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Home add -Advt

ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

*ರೈತರ ಮನೆ ಬಾಗಿಲಿಗೆ ಸಂಚಾರಿ ಪಶು ಚಿಕಿತ್ಸಾ ಸೇವೆ; ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭ*

https://pragati.taskdun.com/mobile-veterinary-servicerecruitmentprabhu-chouan/

Related Articles

Back to top button