Latest

ಸಂಜೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಹತ್ವದ ಭಾಷಣ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ದೇಶದ ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಸೋಂಕಿತರ ಸಂಖ್ಯೆ ಕೂಡ ಇಳಿಮುಖವಾಗುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 5ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ದೇಶದಲ್ಲಿ ಕೊರೊನಾ ನಿರ್ವಹಣೆ ಬಗ್ಗೆ ಪ್ರಧಾನಿ ಮೋದಿ ಭಾಷಣ ಮಾಡಲಿದ್ದು, ಕೇಂದ್ರ ಲಸಿಕಾ ನೀತಿ ಬದಲಾವಣೆ, ದೇಶವಾಸಿಗಳಿಗೆ ಉಚಿತ ಲಸಿಕೆ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ. ಒಟ್ಟಾರೆ ಸಂಜೆ ಪ್ರಧಾನಿ ಮೋದಿ ಮಾಡಲಿರುವ ಭಾಷಣದ ಬಗ್ಗೆ ತೀವ್ರ ಕುತೂಹಲ ಮೂಡಿದೆ.
ಮಣಿಪಾಲ್ ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್

Related Articles

Back to top button