ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಡ ಜನರಿಗಾಗಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಜಾರಿಗೆ ತರಲಾಗುವುದು. ಈ ಯೋಜನೆ ಮೂಲಕ ಪ್ರತಿ ತಿಂಗಳು 5 ಕೆಜಿ ಅಕ್ಕಿ ಅಥವಾ ಗೋದಿಯ ಜತೆ ಕಡಲೆ ಕಾಳನ್ನು ಉಚಿತವಾಗಿ ನೀಡಲಾಗುವುದು ನಂವೆಂಬರ್ ತಿಂಗಳ ಅಂತ್ಯದವರೆಗೂ ಈ ಯೋಜನೆ ವಿಸ್ತರಣೆಯಾಗಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮೂಲಕ 80 ಕೋಟಿ ಬಡ ಜನರಿಗೆ ಅನುಕೂಲವಾಗಲಿದೆ. ಒಂದು ರಾಷ್ಟ್ರ, ಒಂದು ರೇಷನ್ ಕಾರ್ಡ್ ಯೋಜನೆಯತ್ತ ನಾವು ಹೆಜ್ಜೆಯಿಡುತ್ತಿದ್ದೇವೆ. ಆತ್ಮನಿರ್ಭರ ಭಾರತ ಸಂಕಲ್ಪವನ್ನು ನಾವು ಯಶಸ್ವಿಗೊಳಿಸೋಣ ಎಂದು ಹೇಳಿದರು.
ಕೊರೋನಾ ವೈರಸ್ ಸೋಂಕನ್ನು ಜನರು ಹಗುರವಾಗಿ ತೆಗೆದುಕೊಳ್ಳಬಾರದು. ಅನ್ಲಾಕ್ ಘೋಷಣೆ ಆದ ಬಳಿಕ ಜನರು ವೈಯಕ್ತಿಕವಾಗಿ ಬಹಳ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಗಮನಿಸಿದ್ದೇನೆ. ಇಂಥ ಧೋರಣೆ ತರವಲ್ಲ. ಜನರು ಕೊರೋನಾ ವೈರಸ್ ಅನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು ಎಂದು ಕರೆ ನೀಡಿದರು.
ಲಾಕ್ಡೌನ್ ನಿಯಮಗಳನ್ನು ಎಲ್ಲರೂ ತಪ್ಪದೇ ಪಾಲಿಸಬೇಕು. ಲಾಕ್ ಡೌನ್ ನಿಯಮಗಳಿಂದ ಪ್ರಧಾನಿ ಮೋದಿಯೂ ಹೊರತಲ್ಲ. ಯಾರೇ ಆದರೂ ಲಾಕ್ಡೌನ್ ನಿಯಮ ಪಾಲಿಸದಿದ್ದರೆ ಶಿಕ್ಷೆ ಖಚಿತ ಎಂದು ಎಚ್ಚರಿಸಿದರು.
ಇನ್ನು ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಲಾಕ್ಡೌನ್ ಹಿಂಪಡೆಯುವಿಕೆಯ ಮೊದಲ ಹಂತ ಇಂದಿಗೆ ಮುಗಿಯುತ್ತಿದೆ. ಈ ಹಿನ್ನಲೆಯಲ್ಲಿ ನಾಳೆಯಿಂದ ಯಾವ ಕ್ರಮಗಳನ್ನು ಅನುಸರಿಸಬೇಕೆಂಬ ಬಗ್ಗೆ ವಿಶೇಷ ಘೋಷಣೆ ಮಾಡುತ್ತಾರೆಯೇ ಎಂಬ ನಿರೀಕ್ಷೆ ಇತ್ತು ಆದರೆ ಪ್ರಧಾನಿ ಮೋದಿ ನವೆಂಬರ್ ಬಗ್ಗೆ ಬಡವರಿಗೆ ಉಚಿತ ಪಡಿತರದ ಬಗ್ಗೆ ಮಾತ್ರ ಪ್ರಸ್ತಾಪ ಮಾಡಿ ಭಾಷಣ ಮುಗಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ