ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎಂದು ಹೇಳುವ ಮೂಲಕ ರಾಷ್ಟ್ರಕವಿ ಕುವೆಂಪು ಅವರನ್ನು ಸ್ಮರಿಸಿದ್ದಾರೆ.
ಶಿವಮೊಗ್ಗ ಏರ್ ಪೋರ್ಟ್ ಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ, ಶಿವಮೊಗ್ಗ ಜನತೆಯ ಬಹು ದಿನಗಳ ಕನಸು ನನಸಾಗಿದೆ. ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ದೊರೆತಿದೆ. ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇನೆ ಎಂದರು.
ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಹುಟ್ಟುಹಬ್ಬದ ಶುಭಾಷಯಗಳನ್ನು ತಿಳಿಸಿದರು. ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಮಾಡಿದ ಭಾಷಣ ಎಲ್ಲರಿಗೂ ಪ್ರೇರಣೆಯಾಗಿದೆ ಎಂದು ಶ್ಲಾಘಿಸಿದರು.
ಕರ್ನಾಟಕದ ಅಭಿವೃದ್ಧಿ ರಥದಲ್ಲಿ ಅಭಿವೃದ್ಧಿ ಪಥವಿದೆ. ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿಯ ರಥ ಸಾಗುತ್ತಿದೆ. ವಿಮಾನಯಾನ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದುತ್ತಿದೆ. 2014ರ ಮೊದಲು ವಿಮಾನಗಳು ಕೇವಲ ದೊಡ್ಡ ನಗರಗಳಿಗೆ ಸೀಮಿತವಾಗಿತ್ತು. ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಣ್ಣಪುತ್ಟ ನಗರಗಳಲ್ಲಿಯೂ ಏರ್ ಪೋರ್ಟ್ ನಿರ್ಮಾಣ ಮಾಡಲಾಗುತ್ತಿದೆ. ಬಡವನು ಕೂದ ವಿಮಾನದಲ್ಲಿ ಯಾನ ಮಾಡಬಹುದು. ಬಡವರ ಕಲ್ಯಾಣಕ್ಕಾಗಿ ಬಿಜೆಪಿ ಶ್ರಮಿಸುತ್ತಿದೆ ಎಂದರು.
ಶಿವಮೊಗ್ಗ ಮಲೆನಾಡಿನ ಹೆಬ್ಬಾಗಿಲು. ನದಿ ವನ್ಯಸಂಪತ್ತು ಸಮೃದ್ಧವಾಗಿದೆ. ಜೋಗಜಲಪಾತ, ಆನೆಗಳ ಬಿಡಾರ ಎಲ್ಲವೂ ಇದೆ. ಆಗುಂಬೆಯ ಸೂರ್ಯಾಸ್ತಮಾನವನ್ನು ಮರೆಯಲಾಗದು. ಸಿಗಂದೂರು ಚೌಡೇಶ್ವರಿ, ಕೋಟೆ ಆಂಜನೇಯ ದೇವಸ್ಥಾನ. ಗಂಗಾ ಸ್ನಾನ ತುಂಗಾ ಪಾನ ಎಂಬ ಉಕ್ತಿಯೇ ಇದೆ. ಶಿವಮೊಗ್ಗ ವಿಮನ ನಿಲ್ದಾಣದಿಂದ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.
*ಶಿವಮೊಗ್ಗ ಏರ್ ಪೋರ್ಟ್ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ*
https://pragati.taskdun.com/shivamogga-airportpm-narendra-modiinauguration/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ