
ಪ್ರಗತಿವಾಹಿನಿ ಸುದ್ದಿ: ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಇರುವ ಆತಂಕ ದೂರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮ ನಡೆಸಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ ಪರೀಕ್ಷಾ ಪೇ ಚರ್ಚಾ ಆರಂಭವಾಗಿದೆ.
ದೆಹಲಿಯ ಭಾರತ್ ಮಂಟಪ್ ನಲ್ಲಿ 18ನೇ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಸಂವಾದ ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ತಮ್ಮ ಶಾಲೆಯಿಂದಲೇ ಈ ಕಾರ್ಯಕ್ರಮವನ್ನು ನೇರವಾಗಿ ದೂರದರ್ಶನ, ಸಾಮಾಜಿಕ ಜಾಲತಾಣಗಳ ಮೂಲಕ ವೀಕ್ಷಿಸಬಹುದಾಗಿದೆ.
ಪಠ್ಯಪುಸ್ತಕಗಳಿಗೆ ಸಂಬಂಧಿಸಿದ ವಿಷಯ, ಪರೀಕ್ಷೆ ತಯಾರಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿರಬೇಕಾದ ಶಿಸ್ತು, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚುವ ನಿಟ್ಟಿನಲ್ಲಿ ಹಾಗೂ ಒತ್ತಡ ಕಡಿಮೆ ಮಾಡಿ ಆರೋಗ್ಯಪೂರ್ಣರಾಗಿ ಪರೀಕ್ಷೆಯನ್ನು ಎದುರಿಸುವ ನಿಟ್ಟಿನಲ್ಲಿ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.