Latest

ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿರುವ ಪ್ರಧಾನಿ ಮೋದಿ, ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ರೀತಿ ಸ್ಮರಣೀಯ ಎಂದು ಕೊಂಡಾಡಿದ್ದಾರೆ.

ಯಡಿಯೂರಪ್ಪ ಕಾರ್ಯವೈಖರಿಯನ್ನು ಟ್ವೀಟ್ ಮೂಲಕ ಶ್ಲಾಘಿಸಿರುವ ಪ್ರಧಾನಿ ಮೋದಿ, ದಶಕಗಳ ಕಾಲ ಶ್ರಮಿಸಿ, ರಾಜ್ಯದ ಮೂಲೆ ಮೂಲೆಗಳಿಗೂ ಸುತ್ತಾಡಿ, ಜನರನ್ನು ಒಗ್ಗೂಡಿಸಿ ಪಕ್ಷವನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪನವರನ್ನು ಬಣ್ಣಿಸಲು ಪದಗಳಿಲ್ಲ.

ಪಕ್ಷಕ್ಕೆ ಅವರ ಕೊಡುಗೆ ಅಪಾರ. ಬಿಎಸ್ ವೈಗೆ ಪಕ್ಷದ ಮೇಲಿನ ನಿಷ್ಠೆ, ಸಾಮಾಜಿಕ ನ್ಯಾಯ, ರಾಜ್ಯದ ಅಭಿವೃದ್ಧಿಗಾಗಿ ಅವರಿಗಿರುವ ಬದ್ಧತೆ ಅವರ್ಣನೀಯ ಎಂದು ಶ್ಲಾಘಿಸಿದ್ದಾರೆ.

 

Related Articles

Back to top button