
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅಭಿವೃದ್ಧಿಗೆ ಪೂರಕವಾದ ಅತ್ಯುತ್ತಮ ಬಜೆಟ್ ಇದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಬಜೆಟ್ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಬಜೆಟ್ ನಲ್ಲಿ ಎಲ್ಲಾ ವಲಯಗಳಿಗೂ ಆದ್ಯತೆ ನೀಡಲಾಗಿದೆ. ಮುಂದಿನ 100 ವರ್ಷ ಗುರಿಯಾಗಿಸಿ ಬಜೆಟ್ ಮಂಡಿಸಲಾಗಿದೆ. ಎಲ್ಲಾ ವಲಯಗಳಿಗೂ ಆದ್ಯತೆ ನೀಡಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಬಡವರ ಏಳಿಗೆಯೇ ಬಜೆಟ್ ಮಂಡನೆ ಮೂಲ ಉದ್ದೇಶ. ಕೃಷಿ ವಲಯಕ್ಕೆ, ರೈತರ ಆದಾಯ ದ್ವಿಗುಣಕ್ಕೆ ಯೋಜನೆ ರೂಪಿಸಲಾಗಿದೆ. ಬಜೆಟ್ ನಲ್ಲಿ ರಕ್ಷಣಾ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜನಸ್ನೇಹಿ, ಅಭಿವೃದ್ಧಿ ಬಜೆಟ್ ಮಂಡಿಸಿದ್ದಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಬಜೆಟ್ ಬಗ್ಗೆ ಜನಸಾಮಾನ್ಯರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಬಜೆಟ್ ಬಗ್ಗೆ ಸಂಪೂರ್ಣ ವಿವರವನ್ನು ನೀಡಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ; ಪಿಎಂ ಇ-ವಿದ್ಯಾ ಡಿಜಿಟಲ್ ಯುನಿವರ್ಸಿಟಿ ಆರಂಭ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ