Latest

ಪ್ರಧಾನಿ ಮೋದಿಯಿಂದ ಐತಿಹಾಸಿಕ ನಿರ್ಧಾರ?

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯಗಳಲ್ಲಿ ಕೊರೊನಾ ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ, ವಿತರಣೆ ಕುರಿತಾಗಿ ಸಮಗ್ರವಾಗಿ ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಗಳ ಜೊತೆ ಪ್ರಧಾನಿ ಮೋದಿ ಸಭೆ ಆರಂಭವಾಗಿದ್ದು, ಎರಡು ಹಂತಗಳಲ್ಲಿ ಸಭೆ ನಡೆಯುತ್ತಿದೆ. ಆರಂಭದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ರಾಜ್ಯಗಳಾದ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಕೇರಳ, ರಾಜಸ್ಥಾನ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದಿರೆ. ಬಳಿಕ ಎರಡನೆ ಹಂತದ ಸಭೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸುತ್ತಿದ್ದು, ಈ ವೇಳೆ ಆಯಾ ರಾಜ್ಯಗಳ ಕೋವಿಡ್ ಸ್ಥಿತಿಗತಿ ಹಾಗೂ ಕೋವಿಡ್ ಲಸಿಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಸಭೆಗೂ ಮುನ್ನ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ಮೋದಿ ನಡೆಸಲಿರುವ ಈ ಸಭೆಯಲ್ಲಿ ಐತಿಹಾಸಿಕ ನಿರ್ಧಾರದ ಘೋಷಣೆಯಾಗುವ ನಿರೀಕ್ಷೆಯಿದೆ. ಕೋವಿಡ್ ಸೋಂಕಿತರಿಗೆ ಸೌಲಭ್ಯ, ಕೊರೊನಾ ಲಸಿಕೆ ಬಗ್ಗೆ ಸಿಹಿಸುದ್ದಿ ಪ್ರಕಟವಾಗುವ ಸಾಧ್ಯತೆಯಿದೆ. ನಾವೆಲ್ಲರೂ ಪ್ರಧಾನಿ ಮೋದಿ ಘೋಷಣೆ ಬಗ್ಗೆ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button