Kannada NewsKarnataka NewsLatest

*ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪರ ಮಹಿಳೆ ಜೊತೆ ಪತಿಯ ಅಕ್ರಮ ಸಂಬಂಧಕ್ಕೆ ಮನನೊಂದ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸುಬ್ರಹ್ಮಣ್ಯ ನಗರ ನಿವಸದಲ್ಲಿ ನಡೆದಿದೆ.

ರಾಧಾ (33) ಮೃತ ಮಹಿಳೆ. ರಾಧಾ 8 ವರ್ಷಗಳ ಹಿಂದೆ ರಾಮಾಂಜಿನಯ್ಯ ಎಂಬುವವರನ್ನು ವಿವಾಹವಾಗಿದ್ದರು. ಆದರೆ ಪತಿ ರಾಮಾಂಜಿನಯ್ಯ ಮತ್ತೊಂದು ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಹಲವು ಬಾರಿ ಪತಿಗೆ ಬಿದ್ಧಿ ಹೇಳಿದರೂ ತಿದ್ದಿಕೊಂಡಿರಲಿಲ್ಲ.

Home add -Advt

ಪತಿಯ ನಡತೆಗೆ ಮನನೊಂದ ರಾಧಾ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button