Karnataka News

*ಮತ್ತೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ.

ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಧಾಖಲೆಯ ಮಳೆಯಾಗಿದ್ದು, ಗುಡುಗು ಸಹಿತ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ರಸ್ತೆಗಳು ಜಲಾವೃತಗೊಂಡಿದ್ದು, ಮನೆಗಳು, ಹೋಟೆಲ್ ಗಳು, ಅಂಗಡಿಗಳಿಗೂ ನೀರು ನುಗ್ಗಿ ರಾತ್ರಿಯಿಡಿ ಜನರು ಜಾಗರಣೆ ಮಾಡುವಂತಾಗಿದೆ.

Home add -Advt

ಇನ್ನು ಬೆಂಗಳೂರು ಸೇರಿದಂತೆ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 12ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಡಿನಲ್ಲಿಇಯೂ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ವಿಜಯನಗರ, ಕಲಬುರ್ಗಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೋಲಾರ, ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಆಗಸ್ಟ್ 12ರವರೆಗೆ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.


Related Articles

Back to top button