Latest

ಬೆಂಗಳೂರು-ಮೈಸೂರು ಮಾರ್ಗ ಬದಲಾವಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆಗೆ ಸಜ್ಜಾಗಿದ್ದು, ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ದಶಪಥ ರಸ್ತೆ ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಂಡ್ಯಕ್ಕೆ ಆಗಮಿಸಲಿದ್ದು, ಅಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ದಶಪಥ ರಸ್ತೆಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಅಲ್ಲಿಯೇ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಬೆಳಿಗ್ಗೆ 6ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗ ಸೂಚಿಸಲಾಗಿದೆ.

ಬೆಂಗಳೂರಿನಿಂದ ಮೈಸೂರಿಗೆ ಸಂಚರಿಸುವ ವಾಹನಗಳು ಹಾಗೂ ಮೈಸೂರಿನಿಂದ ಬೆಂಗಳೂರಿಗೆ ಸಂಚರಿಸುವ ವಾಹನಗಳು ಈ ಕೆಳಗಿನ ಮಾರ್ಗದಲ್ಲಿ ಸಂಚಾರಿಸಬಹುದಾಗಿದೆ.

ಮೈಸೂರಿನಿಂದ ಬೆಂಗಳೂರಿಗೆ ಸಂಚರಿಸುವ ವಾಹನಗಳು ಬನ್ನೂರು, ಕಿರುಗಾವಲು, ಮಳವಳ್ಳಿ, ಹಲಗೂರು, ಕನಕಪುರದಿಂದಸಾಗಿ ಬೆಂಗಳೂರು ತಲುಪಬಹುದಾಗಿದೆ. ಮೈಸೂರಿನಿಂದ ಮಂಡ್ಯ ಮೂಲಕ ತುಮಕೂರು ಕಡೆ ಹೋಗುವವರು ಮೈಸೂರಿನಿಂದ ಶ್ರೀರಂಗಪಟ್ಟಣ, ಪಾಂಡವಪುರ, ನಾಗಮಂಗಲ, ಬೆಳ್ಳೂರು ಕ್ರಾಸ್ ಮೂಲಕ ತುಮಕೂರಿಗೆ ಸಾಗಬಹುದಾಗಿದೆ.

ಬೆಂಗಳೂರಿನಿಂದ ಮೈಸೂರಿಗೆ ಹೋಗುವ ವಾಹನಗಳು ಚೆನ್ನಪಟ್ಟಣ, ಹಲಗೂರು, ಮಳವಳ್ಳಿ, ಕಿರುಗಾವಲು, ಬನ್ನೂರು ಮೂಲಕ ಮೈಸೂರಿಗೆ ತೆರಳಬಹುದು. ಬೆಂಗಳೂರಿನಿಂದ ಮಲೈಮಹದೇಶ್ವರ ಬೆಟ್ಟಕ್ಕೆ ತೆರಳುವ ವಾಹನಗಳು ಚೆನ್ನಪಟ್ಟಣ, ಹಲಗೂರು, ಮಳವಳ್ಳಿ ಮೂಲಕ ತೆರಳಬೇಕು ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಆದೇಶ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button