Latest

*ರಾಜಧಾನಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇದ್ದು, ರಾಜ್ಯ ಬಿಜೆಪಿ ಪರ ಮತಬೇಟೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ.

ಬೆಂಗಳೂರಿನ ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ಉದ್ಘಾಟನೆ, ವಿವಿಧ ಕಾಮಗಾರಿಗಳಿಗೆ ಚಾಲನೆ ಬಳಿಕ ಪ್ರಧಾನಿ ಮೋದಿ ದಾವಣಗೆರೆಗೆ ತೆರಳಲಿದ್ದು, ಮಹಾಸಂಗಮ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿಯ ವಿಜಯಸಂಕಲ್ಪದ ನಾಲ್ಕು ರಥಗಳು ಇಂದು ದಾವಣಗೆರೆ ತಲುಪಲಿದ್ದು, ಈ ಹಿನ್ನೆಲೆಯಲ್ಲಿ ಮಹಾಸಂಗಮ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಈಗಗಾಲೇ ನವದೆಹಲಿಯಿಂದ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ಪ್ರಧಾನಿ ಮೋದಿಯವರನ್ನು ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ನಾಯಕರು ಸ್ವಾಗತಿಸಿದರು.

Home add -Advt

Related Articles

Back to top button