ಪ್ರಗತಿವಾಹಿನಿ ಸುದ್ದಿ; ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಯಾಣಿಸುತ್ತಿದ್ದ ಕಾರು ಮೈಸೂರು ಬಳಿ ಭೀಕರ ಅಪಘಾತಕ್ಕೀಡಾಗಿದೆ.
ಪ್ರಧಾನಿ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿಯವರು ಪ್ರಯಾಣಿಸುತ್ತಿದ್ದ ಮರ್ಸಿಡೀಸ್ ಬೆಂಜ್ ಕಾರು ಮೈಸೂರಿನ ಕಡಕೊಳ ಬಳಿ ಅಪಘಾತಕ್ಕೀಡಾಗಿದೆ. ಬೆಂಗಳೂರಿನಿಂದ ಬಂಡಿಪುರಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿಯವರ ಮಗ ಹಾಗೂ ಸೊಸೆ ಗಂಭೀರವಾಗಿ ಗಯಗೊಂಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಮೈಸೂರು ಎಸ್ ಪಿ ಸೀಮಾ ಲಾಟ್ಕರ್ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕಚೇರಿಗೆ ಮಾಹಿತಿ ನೀಡಿದ್ದಾರೆ.
*ಬೆಳಗಾವಿ ಗಡಿ ವಿಚಾರದಲ್ಲಿ ವಿವಾದಾತ್ಮಕ ನಿರ್ಣಯ ಮಂಡಿಸಿದ ಮಹಾ ಸಿಎಂ ಶಿಂಧೆ*
https://pragati.taskdun.com/karnataka-maharashtra-border-isshuemaharashtravidhanasabhecm-ekanatha-shindhe/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ