Latest

*ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಕರೆ ಮಾಡಿದ ಪ್ರಧಾನಿ ಮೋದಿ; ಕುತೂಹಲ ಮೂಡಿಸಿದ ವಿದ್ಯಮಾನ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಮಾತನಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಇಂದು ಬೆಳಿಗ್ಗೆ ಕೆ.ಎಸ್.ಈಶ್ವರಪ್ಪನವರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಈಶ್ವರಪ್ಪನವರ ರಾಜಕೀಯ ಪ್ರಬುದ್ಧ ನಡೆಯನ್ನು ಶ್ಲಾಘಿಸಿದ್ದಾರೆ. ಅಲ್ಲದೇ ಪಕ್ಷ ಸದಾ ನಿಮ್ಮ ಜೊತೆ ಇರಲಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಈಶ್ವರಪ್ಪ, ಪ್ರಧಾನಿ ಮೋದಿಯವರು ಕರೆ ಮಾಡಿದ್ದು ನನಗೆ ಅಚ್ಚರಿಯಾಯಿತು. ಪ್ರಧಾನಿ ಮೋದಿ, ವಿಶ್ವನಾಯಕರಾಗಿರುವವರು ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿದ್ದು ಸಂತೋಷವಾಯಿತು. ಇದು ಎಲ್ಲಾ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ ಎಂದು ಖುಷಿ ವ್ಯಕ್ತಪಡಿಸಿದರು.

https://pragati.taskdun.com/2nd-pu-resultannuncekarnataka/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button