*ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮನ: ಬೃಹತ್ ಸಮಾವೇಶ, ಭರ್ಜರಿ ರೋಡ್ ಶೋ; ಕಾರ್ಯಕ್ರಮಗಳ ಪಟ್ಟಿ ಹೀಗಿದೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪರ ಮತಬೇಟೆಗಾಗಿ ರಾಜ್ಯಕ್ಕೆ ಆಗಮಿಸಿದ್ದು, ಎರಡು ದಿನಗಳ ಕಾಲ 8 ಜಿಲ್ಲೆಗಳಲ್ಲಿ ಸಂಚರಿಸಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.
ಬೃಹಹತ್ ಸಮಾವೇಶ, ರೊಡ್ ಶೋ ಮೂಲಕ ಚುನವಣಾ ಪ್ರಚಾರ ಮಾಡಲಿದ್ದಾರೆ. ಈಗಾಗಲೇ ಬೀದರ್ ಜಿಲ್ಲೆಯ ಹುಮ್ನಾಬಾದ್ ಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ಚಿನಕೆರಾ ಕ್ರಾಸ್ ಬಳಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ವಿಜಯಪುರಕ್ಕೆ ತೆರಳಿರುವ ಪ್ರಧಾನಿ ಮೋದಿ ಮಧ್ಯಾಹ್ನ ವಿಜಯಪುರದಲ್ಲಿ ಸಮಾವೇಶ ನಡೆಸಲಿದ್ದಾರೆ.
ಮಧ್ಯಾಹ್ನ 1:45ಕ್ಕೆ ವಿಜಯಪುರದಿಂದ ಕುಡುಚಿಗೆ ತೆರಳಲಿದ್ದು, 2:45ಕ್ಕೆ ಅಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಲಿದ್ದಾರೆ. ಕುಡುಚಿ ಸಮಾವೇಶದ ಬಳಿಕ ಪ್ರಧಾನಿ ಮೋದಿ ಹೆಲಿಕಾಪ್ಟರ್ ಮೂಲಕ 3:40ಕ್ಕೆ ಬೆಳಗಾವಿಗೆ ತೆರಳಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಬೆಳಗಾವಿಯಲ್ಲಿ ಚುನಾವಣಾ ಪ್ರಚಾರದ ಬಳಿಕ ಸಂಜೆ 4:25ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿರುವ ಪ್ರಧಾನಿ, ಸಂಜೆ ಮಾಗಡಿ ರಸ್ತೆ, ನೈಸ್ ರೋಡ್ ಬಳಿ ರೊದ್ ಶೋ ನಡೆಸಲಿದ್ದಾರೆ. ಬಳಿಕ ಸಿಮನಹಳ್ಳಿಯಿಂದ ರಸ್ತೆ ಮಾರ್ಗವಾಗಿ ಪ್ರಧಾನಿ ಮೋದಿ ರಾಜಭವನಕ್ಕೆ ತೆರಳಲಿದ್ದು, ಇಂದು ರಾಜಭವನದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ