Election NewsLatestPolitics

*ಬೀದಿ ಬೀದಿಗಳಲ್ಲಿ ಸ್ಫೋಟ; ಹೆಣ್ಣು ಮಕ್ಕಳ ಮೇಲೆ ಹಲ್ಲೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬೀದಿ ಬೀದಿಗಳಲ್ಲಿ ಸ್ಫೋಟ ಸಂಭವಿಸುತ್ತಿದೆ. ಭಜನೆ ಮಾಡಿದವರ ಮೇಲೆ ಹಲ್ಲೆ ಮಾಡಲಾಗುತ್ತಿದೆ. ಕಾಂಗ್ರೆಸ್ ನಿಂದ ಆದಷ್ಟು ಎಚ್ಚರಿಕೆ ವಹಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

Home add -Advt

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೆಂಪೇಗೌಡರು ಬೆಂಗಳೂರನ್ನು ಸುಂದರ ನಗರವನ್ನಾಗಿ ಮಾಡುವ ಕನಸು ಕಂಡಿದ್ದರು. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಹಾಳು ಮಾಡಿದೆ. ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿಯನ್ನಾಗಿ ಮಾಡಿದೆ ಎಂದು ಕಿಡಿಕಾರಿದರು.

ಬೀದಿ ಬೀದಿಗಳಲ್ಲಿ ಸ್ಫೋಟ ಸಂಭವಿಸುತ್ತಿವೆ. ಭಜನೆ ಕೇಳುವವರ ಮೇಲೆ ದಾಳಿಯಾಗುತ್ತಿದೆ. ನಮ್ಮ ಹೆಣ್ಣುಮಕ್ಕಳ ಮೇಲೆ ಹಲ್ಲೆ ಮಾಡಲಾಗುತ್ತಿದೆ. ಇಂತಹ ಘಟನೆಗಳು ಸಾಮಾನ್ಯವಾದುದಲ್ಲ. ಕಾಂಗ್ರೆಸ್ ಸರ್ಕಾರದ ಬಗ್ಗೆ ಜನ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.


Related Articles

Back to top button