
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾರಣಾಂತಿಕ ಕೊರೋನಾ ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ ಕೊರೋನಾ ವೈರಸ್ ಅಥವಾ ಕೋವಿಡ್-19 ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸೋಂಕು ತಡೆಗಟ್ಟುವ ಸಂಬಂಧ ರಾಜ್ಯ ಸರ್ಕಾರ ಮತ್ತು ಹಲವು ಸಚಿವಾಲಯಗಳು ಜಂಟಿಯಾಗಿ ಕೆಲಸ ಮಾಡುತ್ತಿದ್ದು, ವೈರಸ್ ತಡೆಗಟ್ಟುವ ಮತ್ತು ಬೇರೆ ದೇಶಗಳಿಂದ ಭಾರತಕ್ಕೆ ಬರುವವರ ತಪಾಸಣೆಯನ್ನು ಯಶಸ್ವಿಯಾಗಿ ಮಾಡುತ್ತಿದೆ ಎಂದು ಹೇಳಿದ್ದಾರೆ.
ಕೊರೋನಾ ಬಗ್ಗೆ ಭಯಪಡದೇ ಎಲ್ಲರೂ ಒಟ್ಟಾಗಿ ಇದರ ವಿರುದ್ಧ ಹೋರಾಡೋಣ. ಇದಕ್ಕೆ ಬೇಕಾದ ಪ್ರಾಥಮಿಕ ಮುನ್ನೆಚ್ಚರಿಕೆ ವಹಿಸೋಣ ಎಂದು ಕರೆ ನೀಡಿದ್ದಾರೆ.
ಇದೇ ವೇಳೆ ಸೋಂಕು ಹರಡದಂತೆ ಯಾವ ರೀತಿ ಎಚ್ಚರವಹಿಸಬಹುದು ಎಂಬ ಸಲಹೆಯನ್ನು ನೀಡಿದ್ದು, ಕೈ ಯನ್ನು ಪದೇ ಪದೇ ಸ್ವಚ್ಛಗೊಳಿಸೋಣ ಜೊತೆಗೆ ಕೆಮ್ಮುವಾಗ, ಸೀನುವಾಗ ಬಾಯಿಗೆ ಅಡ್ಡ ಬಟ್ಟೆ ಇಡಲು ಮರೆಯಬೇಡಿ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ