LatestUncategorized

*ಪ್ರಧಾನಿ ಮೋದಿ ಚುನಾವಣಾ ರ್ಯಾಲಿ ಪಟ್ಟಿ ಪ್ರಕಟ; 6 ದಿನಗಳಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಾರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ರ್ಯಾಲಿ, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ದಿನಾಂಕ ನಿಗದಿಯಾಗಿದೆ.

ಏಪ್ರಿಲ್ 29ರಿಂದ ಮೇ 7ರವರೆಗೆ ಒಟ್ಟು 6 ದಿನಗಳ ಕಾಲ 20ಕ್ಕೂ ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ತಲಾ 10 ಕ್ಷೇತ್ರವ್ಯಾಪ್ತಿಗೆ ಒಂದರಂತೆ ಸಮಾವೇಶವನ್ನು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್-ಜೆಡಿಎಸ್ ಪ್ರಭಾವವಿರುವ ಹಳೇ ಮೈಸೂರು ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶಕ್ಕೆ ಹೆಚ್ಚಿನ ಗಮನಕೊಡಲಾಗಿದೆ. ಬೆಂಗಳೂರು ಬಿಟ್ಟರೆ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರವನ್ನು ಹೊಂದಿರುವ ಬೆಳಗಾವಿಯಿಂದಲೇ ಪ್ರಧಾನಿ ಮೋದಿ ಪ್ರಚಾರ ಆರಂಭಿಸಲಿದ್ದಾರೆ.

ಏಪ್ರಿಲ್ 29ರಂದು ಹುಮ್ನಾಬಾದ್, ವಿಜಯಪುರ, ಕುಡಚಿ, ಬೆಂಗಳೂರು ಉತ್ತರ
ಏಪ್ರಿಲ್ 30ರಂದು ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರು
ಮೇ 2ರಂದು ಚಿತ್ರದುರ್ಗ, ವಿಜಯನಗರ, ಸಿಂಧನೂರು, ಕಲಬುರ್ಗಿ
ಮೇ 3 ಮೂಡುಬಿದರೆ, ಹಾವೇರಿ, ಶಿವಮೊಗ್ಗ ಗ್ರಾಮಾಂತರ, ಬೆಂಗಳೂರು ಸೆಂಟ್ರಲ್
ಮೇ 6ರಂದು ಚಿತ್ತಾಪುರ, ನಂಜನಗೂಡು, ತುಮಕೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ
ಮೇ 7ಬಾದಾಮಿ, ಹಾವೇರಿ, ಶಿವಮೊಗ್ಗ ಗ್ರಾಮಾಂತರ, ಬೆಂಗಳೂರು ಕೇಂದ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

https://pragati.taskdun.com/tamil-naducyclonekarnatakarain/
https://pragati.taskdun.com/karnatakarain-updatealert/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button