LatestNationalPoliticsWorld

*ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಗೂ ಅಧಿಕ ಫಾಲೋವರ್ಸ್: ಸೋಷಿಯಲ್ ಮೀಡಿಯಾದಲ್ಲಿ ಹೊಸ ಇತಿಹಾಸ ಸೃಷ್ಟಿದ ವಿಶ್ವದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್​ಗಳ ಗಡಿಯನ್ನು ದಾಟಿದ ಮೊದಲ ವಿಶ್ವ ನಾಯಕ ಮತ್ತು ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

2014 ರಲ್ಲಿ ಇನ್‌ಸ್ಟಾಗ್ರಾಮ್‌ಗೆ ಸೇರಿದ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗಿಂತ ಎರಡು ಪಟ್ಟು ಹೆಚ್ಚು ಫಾಲೋವರ್ಸ್​​ಗಳನ್ನು ಹೊಂದಿದ್ದಾರೆ. ಪ್ರಧಾನಿ ಮೋದಿ ನಂತರ, ಡೊನಾಲ್ಡ್ ಟ್ರಂಪ್ 43.2 ಮಿಲಿಯನ್ ಫಾಲೋವರ್ಸ್​ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ ಇನ್​ಸ್ಟಾಗ್ರಾಂನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ 15 ಮಿಲಿಯನ್ ಫಾಲೋವರ್ಸ್​​ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಬ್ರೆಜಿಲ್ ಅಧ್ಯಕ್ಷರು 14.4 ಮಿಲಿಯನ್ ಫಾಲೋವರ್ಸ್​ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಟರ್ಕಿಶ್ ಅಧ್ಯಕ್ಷ ತಯ್ಯಿಪ್ ಎರ್ಡೋಗನ್ 11.6 ಮಿಲಿಯನ್ ಫಾಲೋವರ್ಸ್​ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ. ಅಂತಿಮವಾಗಿ, ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮೈಲಿ 6.4 ಮಿಲಿಯನ್ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.

Home add -Advt

Related Articles

Back to top button