
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಸೋಲಾಪುರದಲ್ಕಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನವದೆಹಲಿಯಿಂದ ಇಂಡಿಯನ್ ಏರ್ ಪೋರ್ಸ್ ವಿಶೇಷ ವಿಮಾನದ ಮೂಲಕ ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯ ಶಿಷ್ಟಾಚಾರದಂತೆ ವಿಮಾನ ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು.
ಕೇಂದ್ರ ರಸಾಯನಿಕ, ರಸಗೊಬ್ಬರ ಹಾಗೂ ಹೊಸ ನವೀಕರಣ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ, ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಂಸದ ಡಾ. ಉಮೇಶ ಜಾಧವ, ಶಾಸಕರಾದ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಕಲಬುರಗಿ ಮಹಾನಗರ ಪಾಲಿಕೆಯ ಮಹಾಪೌರರಾದ ವಿಶಾಲ ಧರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್. ಚೇತನ ಕುಮಾರ, ಎಸ್.ಪಿ. ಅಡ್ಡೂರು ಶ್ರೀನಿವಾಸಲು ಅವರು ಹೂಗುಚ್ಚ ನೀಡಿ ಪ್ರಧಾನಮಂತ್ರಿಗಳನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೇಲ್ಕೂರ, ಸುಭಾಷ ಗುತ್ತೇದಾರ, ಮಾಲಿಕಯ್ಯ ಗುತ್ತೇದಾರ, ಅಮರನಾಥ ಪಾಟೀಲ, ಬಿ.ಜೆ.ಪಿ. ಪಕ್ಷದ ಕಲಬುರಗಿ ನಗರಾಧ್ಯಕ್ಷ ಚಂದು ಪಾಟೀಲ, ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ ಸೇರಿದಂತೆ ಜಿಲ್ಲೆಯ ಅನೇಕ ಮುಖಂಡರು ಇದ್ದರು.
ನಂತರ ಪ್ರಧಾನಮಂತ್ರಿಗಳು ಇಂಡಿಯನ್ ಏರ್ ಫೋರ್ಸ್ ಹೆಲಿಕಾಪ್ಟರ್ ಮೂಲಕ ಸೋಲಾಪುರಕ್ಕೆ ಪ್ರಯಾಣ ಬೆಳೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ