Latest

*ಜನವರಿ 19ಕ್ಕೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಧಾನಿ ಮೋದಿ ಪ್ರವಾಸ; ಸಂಚಾರ ಮಾರ್ಗ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಜನವರಿ 19ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದು, ಕರ್ಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಜ.19ರಂದು ಬೆಳಿಗ್ಗೆ 11 ಗಂಟೆಗೆ ಕಲಬುರ್ಗಿ ಏರ್ ಪೋರ್ಟ್ ಗೆ ಬಂದಿಳಿಯಲಿರುವ ಪ್ರಧಾನಿ ಮೋದಿ, ಬಳಿಕ ಯಾದಗಿರಿಗೆ ತೆರಳಲಿದ್ದಾರೆ. ಬಳಿಕ ನಾರಾಯಣಪುರದ ಎಡದಂಡೆ ಕಾಲುವೆಯ ಆಧುನಿಕರಣ ಕಾಮಗಾರಿ ಲೋಕಾರ್ಪಣೆ ಮಾಡಲಿದ್ದಾರೆ.

Home add -Advt

ಯಾದಗಿರಿಯಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಶಂಕುಸ್ಥಾಪನೆ ಮಾಡಲಿದ್ದಾರೆ.

ಯಾದಗಿರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಜ.18 ಹಾಗೂ 19ರಂದು ಜಿಲ್ಲೆಯಲ್ಲಿ ಸಾರ್ವಜನಿಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಹುನಸಿಗಿ ಪಟ್ಟಣದಿಂದ ನಾರಾಯನಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಮಾರ್ಗ ಬದಲಾವಣೆ ಮಾಡಲಾಗಿದೆ.ಧುಣಸಗಿಯಿಂದ ನಾರಾಯನಪುರಕ್ಕೆ ಹೋಗುವವರು ಬುಲಶೆಟ್ಟಿಹಾಳ್, ಗೆದ್ದಲಮರಿ, ಜೋಗುಂಡಬಾವಿ ಮಾರ್ಗವಾಗಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಶಾಲಾ-ಕಾಲೇಜಿಗೆ ರಜೆ:
ಯಾದಗಿರಿ ಜಿಲ್ಲೆಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಹುಣಸಗಿ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹುಣಸಗಿ ಕೊಡೆಕಲ್ ನಲ್ಲಿ ಪ್ರಧ ಮೋದಿ ಸಮಾವೇಶ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ತಾಲೂಕಿನ ಅನುದಾನರಹಿತ, ಅನುದಾನಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

*ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಕೇಸ್ ದಾಖಲು*

https://pragati.taskdun.com/santro-ravione-more-case-filemysore/

Related Articles

Back to top button