ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿಗೆ ಆಗಮಿಸಲಿದ್ದು, 3,800 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಸಮಾವೇಶಕ್ಕೆ 1 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದ್ದು, ಕೃಷಿ ಸನ್ಮಾನ್, ವಿದ್ಯಾನಿಧಿ ಸೇರಿ ಹಲವು ಫಲಾನುಭವಿಗಳು ಭಾಗಿಯಾಗಲಿದ್ದಾರೆ. ಭಾರತ ನಿರ್ಮಿತ ಐಎನ್ ಎಸ್ ವಿಕ್ರಾಂತ್ ಯುದ್ಧ ಹಡಗನ್ನು ನಾಡಿಗೆ ಸಮರ್ಪಿಸಲಿದ್ದಾರೆ.
ಪ್ರಧಾನಿ ಮೋದಿ ಸಮಾವೇಶಕ್ಕೆ ಜನರನ್ನು ಕರೆ ತರಲು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಂದ 2000 ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯಪಾಲ ಠಾವರ್ ಚಂದ್ ಗೆ ಮುಖ್ಯಮಂತ್ರಿಗಳಾದ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸರ್ಬಾನಂದ್ ಸೋನೋವಾಲ್, ಹರ್ದಿಪ್ ಸಿಂಗ್ ಪುರಿ, ಶ್ರೀಪಾದ್ ಯೆಸ್ಸೊ ನಾಯಕ್, ಶಂತನು ಠಾಕೂರ್ ಸೇರಿದಂತೆ ರಾಜ್ಯದ ಹಲವು ಸಚಿವರು ಭಾಗಿಯಾಗಲಿದ್ದಾರೆ.
ಕಂಟೇನರ್ ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ಯಾಂತ್ರೀಕರಣ, ಬಿಎಸ್ ಗಿ I ಉನ್ನತೀಕರಣ ಯೋಜನೆ, ಸಮುದ್ರ ನೀರಿನ ನಿರ್ಮಲಿಕರಣ ಘಟಕ ಸೇರಿದಂತೆ 3,800 ಕೋಟಿ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಲೋಕಾರ್ಪಣೆ:
ಕೊಚ್ಚಿಯ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಭಾರತದ ಕಡಲ ಇತಿಹಾಸದಲ್ಲಿಯೇ ನಿರ್ಮಿಸಲಾದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ-ಐಎನ್ ಎಸ್ ವಿಕ್ರಾಂತ್ ಲೋಕಾರ್ಪಣೆ ಮಾಡಲಿದ್ದಾರೆ. ಈ ವೇಳೆ ವಸಾಹತಿಶಾಹಿ ಭೂತಕಾಲವನ್ನು ತೊಡೆದು ಹಾಕುವ ಹಾಗೂ ಶ್ರೀಮಂತ ಭಾರತೀಯ ಕಡಲ ಪರಂಪರೆಗೆ ಸರಿ ಹೊಂದುವ ಹೊಸ ನೌಕೆ ಧ್ವಜ ನಿಶಾನ್ ನ್ನು ಪ್ರಧಾನಿ ಮೋದಿ ಅನಾವರಣಗೊಳಿಸಲಿದ್ದರೆ. ವಿಕ್ರಾಂತ್ ಕಾರ್ಯಾರಂಭ ಭಾರತದ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆ ಗುರುತಿಸುತ್ತದೆ ಎಂದು ರಕ್ಷಣ ಅವಕ್ತಾರರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ