Kannada NewsLatestNationalPolitics
*ಪ್ರಧಾನಿ ಮೋದಿ ಭೇಟಿಯಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾಜಿ ಪ್ರಧಾನಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.
ನವದೆಹಲಿಯ ಸಂಸತ್ ಭವನದಲ್ಲಿರುವ ಪ್ರಧಾನಮಂತ್ರಿಗಳ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿ ಮಾತುಕತೆ ನಡೆಸಿದರು.

ಈ ವೇಳೆ ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಹೆಚ್.ಡಿ.ರೇವಣ್ಣ ಉಪಸ್ಥಿತರಿದ್ದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಈ ಭೇಟಿ ನಡೆದಿದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ