
ಪ್ರಗತಿವಾಹಿನಿ ಸುದ್ದಿ: ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕವೂ ಪಾಕಿಸ್ತಾನ ಸೇನೆಯಿಂದ ಭಾರತದ ಮೇಲೆ ದಾಳಿ ಹಾಗೂ ಭಾರತ ಕೈಗೊಳ್ಳಬೇಕಿರುವ ಮುಂದಿನ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಎನ್ ಎಸ್ ಎ ಸಭೆ ನಡೆಯಿತು.
ನವದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ, ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ಸೇರಿದಂತೆ ಹಲವು ವಿಚಾರಗಳ ಕುರಿತು ಸಭೆ ನಡೆಸಲಾಯಿತು. ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಇತರರು ಉಪಸ್ಥಿತರಿದ್ದರು.