*ರಾಮಸೇತು ನಿರ್ಮಾಣದ ಸ್ಥಳದಲ್ಲಿ ಪ್ರಧಾನಿ ಮೋದಿ ಪೂಜೆ; ಕೋದಂಡರಾಮಸ್ವಾಮಿ ದೇವಸ್ಥಾನಕ್ಕೂ ಭೇಟಿ*

ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ, ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಥಾಪನಾ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಪ್ರವಾಸದಲ್ಲಿದ್ದು, ರಾಮೇಶ್ವರಂಗೆ ಭೇಟಿ ನೀಡಿದ್ದಾರೆ.
ರಾಮೇಶ್ವರಂ ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ರಾಮೇಶ್ವರ ದೇವಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ರಾಮಸೇತು ನಿರ್ಮಾಣವಾದ ಜಾಗ ಅರಿಚಲ್ ಮುನೈಗೆ ತೆರಳಿ ಪೂಜೆ ಸಲ್ಲಿಸಿದರು. ರುದ್ರಾಕ್ಷಿ ಹಿಡಿದು ಸಮುದ್ರಕ್ಕೆ ಇಳಿದ ಪ್ರಧಾನಿ ಮೋದಿ ಕೆಲ ಸಮಯ ರಾಮಜಪ ಪಠಿಸಿದರು.

ಬಳಿಕ ಧನುಷ್ಕೋಡಿಗೆ ಭೇಟಿ ನೀಡಿ ಕೋದಂಡರಾಮಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ತಿರುಚನಾಪಳ್ಳಿಯ ಶ್ರೀರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ಔದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಶ್ರೀರಾಮನಿಗೆ ಸಂಬಂಧಪಟ್ಟ ಹಲವು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದು ವಿಶೇಷ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ