ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿದಿದೆ. ಭಾರತ ಈಗ ಚಂದ್ರನ ಮೇಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ಚಂದ್ರಯಾನ-3 ಯಶಸ್ವಿ ಹಿನೆಲೆಯಲ್ಲಿ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ನಮ್ಮ ಭಾರತ, ನಮ್ಮ ಹೆಮ್ಮೆಯ ಇಸ್ರೋ ವಿಜ್ಞಾನಿಗಳ ಕಠಿಣ ಪರಿಶ್ರಮಕ್ಕೆ ಫಲ ಸಿಕ್ಕಿದೆ. ಚಂದ್ರಯಾನದ ಯಶಸ್ಸು ಪ್ರತಿಯೊಬ್ಬ ಭಾರತೀಯನಿಗೂ ಸಲ್ಲುತ್ತದೆ ಎಂದು ಹೇಳಿದ್ದಾರೆ.
ಚಂದ್ರನ ದಕ್ಷಿಣ ದ್ರುವದಲ್ಲಿ ಲ್ಯಾಂಡ್ ಮಾಡಿದ ಮೊದಲ ದೇಶ ಭಾರತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಂದ್ರಯಾನ ಯಶಸ್ವಿಗೆ ಶ್ರಮಿಸಿದ ಪ್ರತಿಯೊಬ್ಬ ವಿಜ್ಞನೈಗಳಿಗೆ ಹಾಗೂ ಅವರ ಕುಟುಂಬಕ್ಕೆ ಧನ್ಯವಾದ ಎಂದು ತಿಳಿಸಿದರು. ಭಾರತದ ಈ ಯಶಸ್ಸು ಪ್ರತಿ ದೇಶಕ್ಕೂ ಅನುಕೂಲವಾಗಲಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ