Latest

*ಕಾಂಗ್ರೆಸ್ ನಾಯಕರ ಬೈಗುಳಗಳಿಗೆ ಪ್ರಧಾನಿ ಮೋದಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕ ಅಹಂಕಾರ ತುಂಬಿ ತುಳುಕುತ್ತಿದೆ. ಕೆಟ್ಟ ಪದಗಳ ಮೂಲಕ ನನ್ನನ್ನು ನಿಂದಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ರಾಯಚೂರಿನ ಸಿಂಧನೂರಿನಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸಾಲಮನ್ನಾ ಮಾಡುವುದಾಗಿ ಹೇಳಿ ಕಾಂಗ್ರೆಸ್ ರಾಜ್ಯದ ರೈತರಿಗೆ ಮೋಸ ಮಾಡಿತು. ಬಡವರ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಶ್ರೀಮಂತರಾಗಿದ್ದಾರೆ. ದೇಶದ ಬಡವರಿಗಾಗಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾವೊಂದು ಯೋಜನೆಯನ್ನೂ ನಿಡಲಿಲ್ಲ. ಈಗ ಗ್ಯಾರಂಟಿ ಯೋಜನೆ ಎಂದು ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಕಿಡಿಕಾರಿದರು.

Related Articles

ಕಾಂಗ್ರೆಸ್ ನವರು ಅಶ್ಲೀಲ ಪದಗಳ ಮೂಲಕ ನಿಂದಿಸುತ್ತಿದ್ದಾರೆ. ಈ ಮೂಲಕ ಕರ್ನಾಟಕದ ಗೌರವ ಹಾಳು ಮಾಡುತ್ತಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ನನ್ನನ್ನು ವಿಷ ಸರ್ಪ ಎಂದು ಹೇಳಿದರು. ಅವರ ಮಗ ಕೂಡ ನಾನು ನಾಲಯಕ್ ಎಂದು ನಿಂದಿಸಿದ್ದಾರೆ. ದೆಹಲಿಯಲ್ಲಿರುವ ಹೈಕಮಾಂಡ್ ಕುಟುಂಬ ಮೆಚ್ಚಿಸಲು ನನ್ನನ್ನು ನಿಂದಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕರ ಬೈಗುಳಗಳಿಗೆ ನಾನು ಮಾತನಾಡುವುದಿಲ್ಲ, ಬರುವ ಚುನಾವಣೆಯಲ್ಲಿ ಅವರಿಗೆ ರಾಜ್ಯದ ಜನರೇ ಉತ್ತರ ಕೊಡಲಿದ್ದಾರೆ ಎಂದು ಗುಡುಗಿದ್ದಾರೆ.

Home add -Advt

Related Articles

Back to top button