ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಪರ ಭರ್ಜರಿ ಚುನಾವಣಾ ಪ್ರಚಾರ ನದೆಸಲಿದ್ದಾರೆ.
ಮೇ 6ರಂದು ಶನಿವಾರ ಒಂದೇ ದಿನ ನಿಗದಿಆಗಿದ್ದ ಎರಡು ರೋಡ್ ಶೋನಲ್ಲಿ ಬದಲಾವಣೆಯಾಗಿದ್ದು, ಶನಿವಾರ ಸಂಜೆ ನಿಗದಿಯಾಗಿದ್ದ ರೋಡ್ ಶೋ ಭಾನುವಾರಕ್ಕೆ ಮುಂದೂಡಲಾಗಿದೆ. ಶನಿವಾರ ಬೆಳಿಗ್ಗೆ ಹಾಗೂ ಭಾನುವಾರ ಬೆಳಿಗ್ಗೆ ಎರಡು ದಿನ ರೋಡ್ ಶೋ ನಡೆಯಲಿದೆ.
ಶನಿವಾರ ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆ ರೋಡ್ ಶೋ ನಡೆಯಲಿದ್ದು, ಸಿ.ವಿ.ರಾಮನ್ ನಗರದಿಂದ ಬ್ರಿಗೇಡ್ ರಸ್ತೆಯ ವಾರ್ ಮೆಮೋರಿಯಲ್ ವರೆಗೆ ಸಾಗಲಿದೆ.
ಭಾನುವಾರ ಬೆಳಿಗ್ಗೆ ಸುಮಾರು 28 ಕಿ.ಮೀವರೆಗೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ಗೆ ಸಿದ್ಧತೆ ನಡೆಸಲಾಗಿದೆ. ಜೆ.ಪಿ.ನಗರದ ಆರ್ ಬಿಐ ರೋಡ್ ನಿಂದ ಆರಂಭವಾಗುವ ರೋಡ್ ಶೋ ಬೊಮ್ಮನಹಳ್ಳಿ, ಜೆ.ಪಿ.ನಗರ, ಜಯನಗರ, ಅರಬಿಂದೋ ಮಾರ್ಗ, ಕೂಲ್ ಜಾಯಿಂಟ್, ಮಯ್ಯಾಸ್, ಕರಿಸಂದ್ರ, ಸೌತ್ ಎಂಡ್ ಸರ್ಕಲ್, ನೆಟ್ಟಕಲ್ಲಪ್ಪ ಸರ್ಕಲ್, ಎನ್ ಆರ್ ಕಾಲೋನಿ, ಬಸವನಗುಡಿ, ರಾಮಕೃಷ್ಣ ಆಶ್ರಮ, ಉಮಾ ಥಿಯೇಟರ್, ಟಿ. ಆರ್ ಮಿಲ್, ಸಿರ್ಸಿ ಸರ್ಕಲ್, ಈಟಾ ಮಾಲ್, ಮಾಗಡಿ ರಸ್ತೆ, ಬಸವೇಶ್ವರ ನಗರ, ವೆಸ್ಟ್ ಆಫ್ ಕಾರ್ಡ್ ರೋಡ್, ಮೋದಿ ಆಸ್ಪತ್ರೆ, ನವರಂಗ್ ಸರ್ಕಲ್, ಸಂಪಿಗೆ ರಸ್ತೆ, ಮಲ್ಲೇಶ್ವರಂ, ಮಾರಮ್ಮ ದೇವಸ್ಥಾನದವರೆಗೆ ನಡೆಯಲಿದೆ.
ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆಯಲ್ಲಿ ಈ ಮಾರ್ಗಗಳಲ್ಲಿ ವಾಹನ ಸಂಚಾರ ಬಂದ್ ಆಗಲಿದ್ದು, ಪರ್ಯಾಯ ಮಾರ್ಗಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ