Kannada NewsKarnataka NewsLatestPolitics

*ಶಿವಮೊಗ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದೆ. ಮತದಾರರನ್ನು ಸೆಳೆಯಲು ಬಿಜೆಪಿ ಭರ್ಜರಿ ಕಸರತ್ತು ನಡೆಸಿದೆ. ಈ ನಡುವೆ ಇಂದು ಪ್ರಧಾನಿ ನರೇಂದ್ರ ಮೋದಿ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.

ಶಿವಮೊಗ್ಗ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯನ್ನು ರಾಜ್ಯ ಬಿಜೆಪಿ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಶಿವಮೊಗ್ಗ ಏರ್ ಪೋರ್ಟ್ ನಿಂದ ಪ್ರಧಾನಿ ಮೋದಿ ಅಲ್ಲಮಪ್ರಭು ಫ್ರೀಡಂ ಪಾರ್ಕ್ ಗೆ ರಸ್ತೆ ಮಾರ್ಗದಲ್ಲಿ ಪ್ರಯಾಣಿಸಿದರು.

ಬಳಿಕ ತೆರೆದ ವಾಹನದಲ್ಲಿ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಫ್ರೀಡಂ ಪಾರ್ಕ್ ನಿಂದ ವೇದಿಕೆಯ ಸ್ಥಳಕ್ಕೆ ಆಗಮಿಸಿದರು. ಈ ವೇಳೆ ಪ್ರಧಾನಿ ಮೋದಿ ಅವರಿಗೆ ಸಂಸದ ಬಿ.ವೈ ರಾಘವೇಂದ್ರ, ದಾವಣಗೆರೆ ಬಿಜೆಪಿ ಅಭ್ಯರ್ಥಿ ಸಾಥ್ ನೀಡಿದರು. ತೆರೆದ ವಾಹನದಲ್ಲಿ ಫ್ರೀಡಂ ಪಾರ್ಕ್ ಮೈದಾನದ ಇಕ್ಕೆಲಗಳಲ್ಲಿ ನೆರೆದಿದ್ದ ಜನರತ್ತ ಕೈಬೀಸುತ್ತಾ ಸಾಗಿದರು.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button