Kannada NewsLatestPoliticsWorld

*ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಐದು ರಾಷ್ಟ್ರ ಪ್ರವಾಸದ ಕೊನೇ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ಭೇಟಿ ನೀಡಿದ್ದು, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಯವರನ್ನು ಭೇಟಿಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರವಾಸದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಅವರುಗೆ ಮೆಲೋಡಿ ಚಾಕೊಲೇಟ್ ಪ್ಯಾಕ್ ಉಡುಗೊರೆಯಾಗಿ ಕೊಟ್ಟಿದ್ದಾರೆ. ಎರಡೂ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ ಎಂದು ಹಾರೈಸಿದ್ದಾರೆ. ಪ್ರಧಾನಿ ಮೋದಿಯಿಂದ ಮೋದಿಯಿಂದ ಗಿಫ್ಟ್​ ಪಡೆದಿರುವ ಮೆಲೋನಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಮೋದಿ ತಮ್ಮ ಐದು ರಾಷ್ಟ್ರಗಳ ಪ್ರವಾಸದ ಐದನೇ ಮತ್ತು ಕೊನೆಯ ಹಂತಕ್ಕಾಗಿ ಮಂಗಳವಾರ ರೋಮ್‌ಗೆ ಬಂದಿಳಿದರು. ವ್ಯಾಪಾರ, ಹೂಡಿಕೆ, ರಕ್ಷಣೆ, ಶುದ್ಧ ಇಂಧನ, ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಸಾಂಸ್ಕೃತಿಕ ವಿನಿಮಯಗಳಲ್ಲಿ ಸಹಕಾರದ ಮೇಲೆ ಕೇಂದ್ರೀಕರಿಸುವ ಜಂಟಿ ಕಾರ್ಯತಂತ್ರದ ಕ್ರಿಯಾ ಯೋಜನೆ 2025-2029 ರ ಅಡಿಯಲ್ಲಿ ಭಾರತ ಮತ್ತು ಇಟಲಿ ಸಂಬಂಧಗಳನ್ನು ಗಟ್ಟಿಗೊಳಿಸುತ್ತಿರುವ ಸಂದರ್ಭದಲ್ಲಿ ಈ ಭೇಟಿ ಮಹತ್ವ ಪಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button