Latest

*ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ ಆಗಮನ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಫೆಬ್ರವರಿ 6 ರಂದು ನಡೆಯಲಿರುವ ಇಂಡಿಯಾ ಎನರ್ಜಿ ವೀಕ್ , ಅಂತರರಾಷ್ಟ್ರೀಯ ಸಮ್ಮೇಳನವಿದ್ದು, ಇದರ ಉದ್ಘಾಟನೆಗೆ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಬೆಂಗಳೂರಿನ ಕಾರ್ಯಕ್ರಮವನ್ನು ಮುಗಿಸಿ ತುಮಕೂರಿನಲ್ಲಿ ಹೆಚ್ ಎ ಎಲ್ ನ ಹೆಲಿಕಾಪ್ಟರ್ ಉತ್ಪಾದನಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ರೈತಶಕ್ತಿ ಯೋಜನೆಗೆ ಚಾಲನೆ ಬಳಿಕ ಮಾಧ್ಯಮದವರೊಂದಿಗೆ ಸಿಎಂ ಬೊಮ್ಮಾಯಿ ಮಾತನಾಡಿದರು.

ರೈತಶಕ್ತಿ ಯೋಜನೆಗೆ ಚಾಲನೆ :
2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದಂತೆ ರೈತಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗುತ್ತಿದೆ. ರೈತರಿಗೆ ಯಂತ್ರೋಪಕರಣ ಬಳಸುವಾಗ ಆಗುವ ಡೀಸೆಲ್ ವೆಚ್ಚವನ್ನು ಭರಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯದ ರೈತರಿಗೆ ಅನುಕೂಲ ಕಲ್ಪಿಸುವ ಸದುದ್ದೇಶದಿಂದ ರೈತಪರ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದರು.

ಮಹದಾಯಿ ಯೋಜನೆ :
ಮಹದಾಯಿ ಯೋಜನೆ ತೀರ್ಪಿನ ಬಗ್ಗೆ ಗೋವಾ ಮುಖ್ಯಮಂತ್ರಿಗಳು ಅಸಮಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿ, ಈಗಾಗಲೇ ಕಾನೂನು ಹೋರಾಟವಾಗಿ ಸುಪ್ರೀಂ ಕೋರ್ಟ್ ನ ಆದೇಶದ ಮೇಲೆ ಟ್ರಿಬ್ಯುನಲ್ ರಚನೆಯಾಗಿ, ಹತ್ತು ವರ್ಷಗಳ ಕಾಲ ಎಲ್ಲ ಆಯಾಮಗಳಲ್ಲಿ ಪರಿಶೀಲನೆಯನ್ನು ನಡೆಸಿ ಟ್ರಿಬ್ಯುನಲ್ ತೀರ್ಪು ನೀಡಲಾಗಿದೆ. ಆ ತೀರ್ಪಿನ ಅನುಷ್ಠಾನದ ಅಧಿಸೂಚನೆಯನ್ನು ಕೇಂದ್ರ ಸರ್ಕಾರ 2017 ರಲ್ಲಿ ಮಾಡಿತ್ತು. ಡಿಪಿಆರ್ ಅನುಮೋದನೆಯಾಗಿದ್ದು, ಹಂತ ಹಂತವಾಗಿ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ. ಕಾನೂನು ಹೋರಾಟದ ನಂತರವೇ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಹೆಚ್. ವಿಶ್ವನಾಥ್ ಅವರ ಹೇಳಿಕೆಗಳಿಗೆ ನಾನೆಂದೂ ಉತ್ತರವನ್ನು ಕೊಟ್ಟಿಲ್ಲ. ಅವರ ಹೇಳಿಕೆಗಳಿಗೆ ಹೆಚ್ಚಿನ ಮಹತ್ವ ನೀಡುವ ಅವಶ್ಯಕತೆ ಇಲ್ಲ ಎಂದರು.

*ಜನಾರ್ಧನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ಯಾರ ವಿರುದ್ಧ ಸ್ಪರ್ಧಿಸಲಿದ್ದಾರೆ ಗೊತ್ತಾ?*

https://pragati.taskdun.com/janaradhana-reddykalyana-rathayatrearuna-lakshmibellary-candidate/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button