Latest

ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೆಟ್ರೋ ಪಿಲ್ಲರ್ ಗೆ ಕೆ ಎಸ್ ಆರ್ ಟಿಸಿ ಬಸ್ ಡಿಕ್ಕಿ; 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆ ಎಎಸ್ ಆರ್ ಟಿಸಿ ಬಸ್ ಮೆಟ್ರೋ ಪಿಲ್ಲರ್ ಗೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ.

ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿತ್ತು. 45 ಜನ ಪ್ರಯಾಣಿಕರು ಬಸ್ ನಲ್ಲಿದ್ದರು. ರಸ್ತೆ ಗುಂಡಿ ತಪ್ಪಿಸಲೆಂದು ಹೋದ ಬಸ್ ಚಾಲಕನ ನಿಯಂತ್ರಣ ತಪ್ಪಿ 4 ಅಡಿ ತಡೆಗೋಡೆಗೆ ಗುದ್ದಿದೆ. ಬಳಿಕ ಮೆಟ್ರೋ ಪಿಲ್ಲರ್ ಗೆ ಬಸ್ ಡಿಕ್ಕಿಯಾಗಿದೆ.

Home add -Advt

ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿನ್ನಾಭರಣ ಖರೀದಿಗೆ ಮುಂದಾದರೆ ಇಂದಿನ ಬೆಲೆ ಗಮನಿಸಿ

Related Articles

Back to top button