Karnataka NewsLatestPolitics

*ಅಡ್ಡಮತದಾನ: ಧರ್ಮಸ್ಥಳದಲ್ಲಿ ಶಾಸಕರಿಂದ ಆಣೆ-ಪ್ರಮಾಣ ಮಾಡಲು ಮುಂದಾದ ಬಿಜೆಪಿ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್​​ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ ಹಿನ್ನೆಲೆಯಲ್ಲಿ ತೀವ್ರ ಮುಜುಗರ ಅನುಭವಿಸುತ್ತಿರುವ ಬಿಜೆಪಿ ನಾಯಕರು, ಇದೀಗ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಮುಂದಾಗಿದ್ದಾರೆ.

ಧರ್ಮಸ್ಥಳದಲ್ಲಿ ಬಿಜೆಪಿ‌ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ. ಮುಂದಿನ ವಾರ ಸಭೆ ನಡೆಯಲಿದ್ದು, ಸಭೆಯಲ್ಲಿ ಅಡ್ಡ ಮತದಾನದ ಬಗ್ಗೆ ಶಾಸಕರಿಂದ ಆಣೆ ಮಾಡಿ ಮಾಹಿತಿ ಸಂಗ್ರಹ ನಡೆಯಲಿದೆ. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಎದುರಲ್ಲಿ ಆಣೆ-ಪ್ರಮಾಣ ಮಾಡಲಾಗುತ್ತಿದೆ.

Home add -Advt

ಈ ಬಗ್ಗೆ ಮಾಹಿತಿ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಪರಿಷತ್ ಚುನಾವಣೆಯಲ್ಲಿ‌ ನಮ್ಮಿಂದ 4 ಅಡ್ಡ ಮತದಾನ ಆಗಿದೆ ಎಂಬ ಚರ್ಚೆ ಮಾಧ್ಯಮಗಳಲ್ಲಿ ನಡೆಯುತ್ತಿದೆ. ನಮ್ಮ ಕಾರ್ಯಕರ್ತರು, ಶಾಸಕರ ನಡವಳಿಕೆ ಬಗ್ಗೆ ಬೇಸರ ಪಟ್ಟಿದ್ದಾರೆ. ಹೀಗಾಗಿ ನನ್ನನ್ನು ಸೇರಿ ಎಲ್ಲ 63 ಶಾಸಕರ ಮೇಲೂ ಅನುಮಾನ ಪಡುವಂತಾಗಿದೆ. ನಿನ್ನೆ ನಿತಿನ್ ನಬಿನ್ ಅವರಿಗೆ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದೇನೆ. ದೆಹಲಿಗೆ ನಾನು ಹಾಗೂ ಆರ್. ಅಶೋಕ್ ಅವರು ಹೋಗುತ್ತಿದ್ದು, ಈ ವಾರದಲ್ಲೇ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲು ಅಶೋಕ್ ಅವರ ಜತೆ ಚರ್ಚೆ ಮಾಡುತ್ತೇನೆ ಎಂದರು.

ತಾಯಿಗೆ ದ್ರೋಹ ಮಾಡಿದ ಶಾಸಕರು ಯಾರೆಂದು ಶ್ರೀಕ್ಷೇತ್ರದಲ್ಲೇ ಗೊತ್ತಾಗಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ. ಎಲ್ಲವೂ ಧರ್ಮಸ್ಥಳದಲ್ಲಿ ತೀರ್ಮಾನವಾಗಲಿದೆ ಎಂದು ಹೇಳಿದರು.

Related Articles

Back to top button