Latest

*ಕಾಂಗ್ರೆಸ್ ಪಕ್ಷದ ವಾರಂಟಿಯೇ ಎಕ್ಸ್ ಪೈರ್ ಆಗಿದೆ; ಪ್ರಧಾನಿ ಮೋದಿ ವ್ಯಂಗ್ಯ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಿಜೆಪಿ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು. ಕಾರ್ಯಕರ್ತರ ಪ್ರತಿ ಕುಟುಂಬ ಸದಸ್ಯರಿಗೂ ಡಬಲ್ ಇಂಜಿನ್ ಸರ್ಕಾರದ ಯೋಜನೆಗಳ ಬಗ್ಗೆ ವಿವರಿಸಬೇಕು. ಬೂತ್ ಮಟ್ಟದಲ್ಲಿ ಗೆದ್ದರೆ ಚುನಾವಣೆ ಗೆಲುವು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.

ಕರ್ನಾಟಕ ಬಿಜೆಪಿ ಕಾರ್ಯಕರ್ತರ ಜೊತೆ ವರ್ಚುವಲ್ ಸಂವಾದ ನಡೆಸಿದ ಪ್ರಧಾನಿ ಮೋದಿ, ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯಗಳಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಬೇಕು. ರಾಜ್ಯದ ಯುವ ಪೀಳಿಗೆಯ ಭವಿಷ್ಯ ನಮ್ಮ ಮುಂದಿದೆ. ಅವರ ಭವಿಷ್ಯಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿ ಗೊಳಿಸಲಾಗಿದೆ. ದೇಶದಲ್ಲಿ ಪ್ರತಿಯೊಂದು ಕ್ಷೇತ್ರಗಳಲ್ಲಿ ನಾವಿಂದು ಅಭಿವೃದ್ಧಿ ಸಾಧಿಸಿದ್ದೇವೆ ಎಂದು ಹೇಳಿದರು.

ಕರ್ನಾಟಕ ಸಾಂಸ್ಕೃತಿಕವಾಗಿ, ಆಧ್ಯಾತ್ಮಿಕವಾಗಿ ಸಾಕಷ್ಟು ಸಾಧನೆಗಳನ್ನು ಮಾಡಿದೆ. ಕನ್ನಡ ಭಾಷೆ ಸಮೃದ್ಧ ಸಾಹಿತ್ಯವನ್ನು ಹೊಂದಿದೆ. ಬೆಂಗಳೂರು ಸ್ಟಾರ್ಟಪ್ ಗಳಲ್ಲಿ ಮುಂಚೂಣಿಯಲ್ಲಿದೆ. ಕರ್ನಾಟಕದ ಬಗ್ಗೆ ದಶಕಗಳಿಂದಲೂ ನನಗೆ ಗೊತ್ತಿದೆ. ನಾನು ರಜಕೀಯಕ್ಕೆ ಬರುವ ಮೊದಲು ಹಲವು ಬಾರಿ ಕರ್ನಾಟಕಕ್ಕೆ ಭೇಟಿ ಕೊಟ್ಟಿದ್ದೇನೆ. ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಬದಲಾವಣೆ ಸಾಧ್ಯ. ಬಿಜೆಪಿಗೆ ಬಡವರ ಬಗ್ಗೆ ಅಪಾರ ಕಾಳಜಿಯಿದೆ. ಹಲವಾರು ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ. ಬಿಜೆಪಿಗೆ ಯಾವುದೇ ಶಾರ್ಟ್ ಕಟ್ ಗಳಿಲ್ಲ. ದೇಶದ ಅಭಿವೃದ್ಧಿಗೆ ಸದಾ ಶ್ರಮಿಸುತ್ತದೆ. ದೇಶದಲ್ಲಿ 25 ವರ್ಷಗಳ ಹಿಂದೆ ವೈದ್ಯರೇ ಇರಲಿಲ್ಲ.ಇಂದು ಸಾಕಷ್ಟು ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳು, ವೈದ್ಯರ ನೇಮಕವಾಗಿದೆ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪಿಒಸಿದ ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷಕ್ಕೆ ವಾರಂಟಿ ಎಕ್ಸ್ ಪೈರ್ ಆಗಿದೆ. ಈಗ ಗ್ಯಾರಂಟಿ ಕೊಡುವುದರ ಬಗ್ಗೆ ಮಾತನಾಡುತ್ತಿದೆ. ಕಾಂಗ್ರೆಸ್ ನ ಸುಳ್ಳು ಭರವಸೆಗಳಿಗೆ ಯಾರೂ ಬಲಿಯಾಗಬೇಡಿ. ರಾಜ್ಯದಲ್ಲಿ ಈಬಾರಿ ಬಿಜೆಪಿ ದಾಖಲೆ ಮಟ್ಟದಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಹೇಳಿದರು.

Home add -Advt
https://pragati.taskdun.com/vidhanasabha-electioncongresscomplaintbjp/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button