Kannada NewsKarnataka NewsLatestPolitics

*ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ; ದಾಖಲೆ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಸಂಕಲ್ಪ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ನೆಲದಿಂದಲೇ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ.

ಕಲಬುರ್ಗಿಯಲ್ಲಿ ನಡೆದ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ, ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು. ಇಲ್ಲಿನ ಜನರ ಉತ್ಸಾಹ ಕಂಡು ಬಹಳ ಸಂತಸವಾಯಿತು ಎಂದರು.

ಈ ಬಾರಿ ದಾಖಲೆ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಸಂಕಲ್ಪ ಮಾಡಿದೆ. ಕಾಂಗ್ರೆಸ್ ನವರು ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಕರ್ನಾಟಕದ ಜನರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ದೇಶದ ಜನರಿಗೆ ಕಾಂಗ್ರೆಸ್ ಮೇಲೆ ಆಕ್ರೋಶವಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Home add -Advt


Related Articles

Back to top button