ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದಡಿ ಎಫ್ ಐ ಆರ್ ದಾಖಲಾಗಿದೆ.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಮಹಿಳೆಯೊಬ್ಬರು ಯಡಿಯೂರಪ್ಪನವರ ವಿರುದ್ಧ ದೂರು ನೀಡಿದ್ದಾರೆ. ಫೆಬ್ರವರಿ 2ರಂದು ಸಹಾಯಕೇಳಲು ಬಂದಾಗ ತನ್ನ 17 ವರ್ಷದ ಮಗಳ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಅಲ್ಲದೇ ಬಾಲಕಿ ಕೂಡ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಇನ್ನು ಬಾಲಕಿಯ ತಾಯಿ ಈ ಹಿಂದೆಯೂ ಹಲವು ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳ ವಿರುದ್ಧ ಬೆದರಿಕೆ, ಹಲ್ಲೆ ಸೇರಿದಂತೆ 53 ಕೇಸ್ ಗಳನ್ನು ದಾಖಲಿಸಿದ್ದರು ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ