Kannada NewsKarnataka NewsLatest

*ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: 52 ವರ್ಷದ ಮಹಿಳೆ ವಿರುದ್ಧದ ಪೋಕ್ಸೋ ಕೇಸ್ ರದ್ದುಗೊಳಿಸಲು ಸಾಧ್ಯವಿಲ್ಲ ಎಂದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕನ ಮೇಲೆ ಮಹಿಳೆಯೊಬ್ಬಳು ಲೈಂಗಿಕ ದೌರ್ಜ್ಯನವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ 52 ವರ್ಷದ ಮಹಿಳೆ ವಿರುದ್ಧದ ಪೋಕ್ಸೋ ಕೇಸ್ ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.

Home add -Advt

ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಘಟನೆ ನಡೆದು 4 ವರ್ಷದ ನಂತರ ಮಹಿಳೆ ವಿರುದ್ಧ ಕೇಸ್ ದಾಖಲಾಗಿದೆ. ಮಹಿಳೆಗೆ ಪೋಕ್ಸೋ ಕಾಯ್ದೆ ಅನ್ವಯವಾಗಲ್ಲ. ಅಲ್ಲದೇ ಮಹಿಳೆ ಬಾಲಕನ ಮೇಲೆ ಅತ್ಯಾಚಾರವೆಸಗಲು ಸಾಧ್ಯವಿಲ್ಲ ಎಂದು ಮಹಿಳೆ ಪರ ವಕೀಲರು ವಾದ ಮಂಡಿಸಿದ್ದರು. ಈ ವಾದವನ್ನು ಹೈಕೋರ್ಟ್ ತಿರಸ್ಕರಿಸಿದೆ.

18 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಕ್ಸೋ ಕಾಯ್ದೆಯ ರಕ್ಷಣೆಯಿದೆ. ಹೆಣ್ಣು ಮಕ್ಕಳ ರೀತಿ ಗಂಡುಮಕ್ಕಳಿಗೂ ರಕ್ಷಣೆ ಇದೆ. ವರದಿಗಳ ಪ್ರಕಾರ ಗಂಡು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಶೇ. 54.4ರಷ್ಟಿದೆ. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಶೇ.45.6 ರಷ್ಟಿದೆ. ಪೋಕ್ಸೋ ಕಾಯ್ದೆಗೆ ಯಾವುದೇ ಲಿಂಗ ಬೇಧವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.


Related Articles

Back to top button