
ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ.
ಬಿಎಸ್ ವೈ ಪರ ವಕೀಲ ಸಿದ್ಧಾರ್ಥ ಲೂತ್ರಾ ಹೈಕೋರ್ಟ್ ಆದೇಶದಲ್ಲಿರುವ ಕೆಲ ದೋಷಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ಸುಪ್ರೀಂ ಕೋರ್ಟ್ ವಿಚಾರಣೆಗೆ ತಡೆ ನೀಡಿದೆ.


