Politics

*ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್*

ಪೋಕ್ಸೋ ಕೇಸ್

Home add -Advt


ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಧಾರವಾದ ಹೈಕೋರ್ಟ್ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠದ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ, ಪೋಕ್ಸೋ ಕೇಸ್ ರದ್ದತಿಗೆ ನಿರಾಕರಿಸಿದೆ. ಆದರೆ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ಸಮ್ಮಿತಿಸಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

Related Articles

Back to top button