Kannada NewsLatestPolitics

*ಪೋಕ್ಸೋ ಕೇಸ್: ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಕೇಸ್​​ ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದ ಬಂಡಿ ಸಂಜಯ್ ಕುಮಾರ್ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಭಗೀರಥ್ ಸಾಯಿ ಬಂಧಿತ ಆರೋಪಿ. ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಭಗೀರಥ್ ಸಾಯಿಯನ್ನು ಬಂಧಿಸಲಾಗಿದೆ. ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ತೆಲಂಗಾಣ ಹೈಕೋರ್ಟ್​​ ನಿರಾಕರಿಸಿದ ಕೆಲವೇ ಗಂಟೆಗಳಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

Home add -Advt

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ನಂಬಿಕೆ ನನ್ನದು ಎಂದು ಹೇಳಿದ್ದಾರೆ. ಕಾನೂನು ಮತ್ತು ನ್ಯಾಯಾಂಗದ ಮೇಲೆ ಅತ್ಯಂತ ಗೌರವದಿಂದ, ನನ್ನ ಪುತ್ರ ಬಂಡಿ ಭಗೀರಥ್ ನಮ್ಮ ವಕೀಲರ ಮೂಲಕ ತೆಲಂಗಾಣ ಪೊಲೀಸರ ಮುಂದೆ ತನಿಖೆಗೆ ಹಾಜರಾಗಿದ್ದಾರೆ. ನನ್ನ ಸ್ವಂತ ಮಗನಾಗಲಿ ಅಥವಾ ಸಾಮಾನ್ಯ ನಾಗರಿಕನಾಗಲಿ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ನಾನು ಹಿಂದೆಯೂ ಹೇಳಿದ್ದೇನೆ. ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ ಎಂದು ನಿರಂತರವಾಗಿ ಹೇಳುತ್ತಿದ್ದಾನೆ. ನಮ್ಮ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಕಾನೂನು ತಜ್ಞರ ಮುಂದೆ ಇಟ್ಟಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.

ನ್ಯಾಯ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ನ್ಯಾಯ ತಡವಾಗಬಹುದು, ಆದರೆ ನಿರಾಕರಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.


Related Articles

Back to top button