Belagavi NewsBelgaum NewsKarnataka News

*ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಅರೆಸ್ಟ್ ಆಗಿದ್ದ ಶಿಕ್ಷಕ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷಕನನ್ನು ಸಸ್ಪೆಂಡ್ ಮಾಡಿ ಚಿಕ್ಕೋಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಸರ್ಕಾರಿ ಶಾಲೆಯೊಂದರ ಶಿಕ್ಷಕ ಮೊಹಮ್ಮದ್ ಸಾದಿಕ್ ಮಿಯಾ ಬೇಗ್ ಎಂಬಾತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಶಿಕ್ಷಕನ ವಿರುದ್ಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಕಾಮುಕ ಶಿಕ್ಷಕನನ್ನು ಬಂಧಿಸಲಾಗಿದೆ.

Home add -Advt

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಚಿಕ್ಕೋಡಿ ಡಿಡಿಪಿಐ ಆರೋಪಿ ಶಿಕ್ಷಕ ಮೊಹಮ್ಮದ್ ಸಾದಿಕ್ ಮಿಯಾನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Related Articles

Back to top button