Kannada NewsKarnataka NewsLatestUncategorized

*BREAKING: ಮುರಾಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ; ಕೋರ್ಟ್ ನಿಂದ ಬಂಧನ ವಾರಂಟ್ ಜಾರಿ*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶ್ರೀಗಳಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಚಿತ್ರದುರ್ಗ ಕೋರ್ಟ್ ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.

ಮೊದಲನೇ ಪೋಕ್ಸೋ ಕೇಸ್ ನಲ್ಲಿ ಮುರುಘಾ ಶ್ರೀ ನಾಲ್ಕು ದಿನಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಮುರುಘಾ ಶ್ರೀಗಳಿಗೆ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳಿಗೆ ಬಂಧನ ಭೀತಿ ಆರಂಭವಾಗಿದೆ.

Related Articles

ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಮೊದಲನೇ ಪೋಕ್ಸೋ ಕೇಸ್ ನಲ್ಲಿ ಹೈಕೋರ್ಟ್ ಮುರುಘಾ ಶ್ರೀಗಳಿಗೆ ಇತ್ತೀಚೆಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದಷ್ಟೇ ಮುರುಘಾ ಶ್ರೀ ಬಿಡುಗಡೆಯಾಗಿದ್ದರು. ಇದೀಗ ಎರಡನೇ ಪೋಕ್ಸೋ ಕೇಸ್ ನಲ್ಲಿ ಬಂಧನ ವಾರಂಟ್ ಜಾರಿ ಮಾಡಲಾಗಿದ್ದು, ಮತ್ತೆ ಬಂಧನವಾಗುವ ಸಾಧ್ಯತೆ ಇದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button