ಪ್ರಗತಿವಾಹಿನಿ ಸುದ್ದಿ: ಶಾಲೆಯ ವಿರಾಮದ ವೇಳೆ ವಿಷಕಾರಿ ಬೀಜ ಸೇವಿಸಿ 8 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಳ್ಳಾರಿ ಜಿಲ್ಲೆಯ ತೆಕ್ಕಲಕೋಟೆಯ ವಾಲ್ಮೀಕಿ ನಗರದಲ್ಲಿ ನಡೆದಿದೆ.
ಇಲ್ಲಿನ ಸರ್ಕಾರಿ ಶಾಲೆಯ ಮಕ್ಕಳು, ವಿಶ್ರಾಂತಿ ವೇಳೆ ವಿಷಕಾರಿ ಬೀಜ ಸೇವಿಸಿದ್ದಾರೆ. ಬಳಿಕ ಮಕ್ಕಳಲ್ಲಿ ವಾಂತಿ-ಭೇದಿ ಶುರುವಾಗಿದೆ. ಅಸ್ವಸ್ಥಗೊಂಡ 8 ಮಕ್ಕಳನ್ನು ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಓರ್ವ ವಿದ್ಯಾರ್ಥಿಗೆ ಹೆಚ್ಚಿನ ಸಮಸ್ಯೆ ಕಾಣಿಸಿಕೊಂಡಿದ್ದು, ಚಿಕಿತ್ಸೆ ಮುಂದುವರೆದಿದೆ. ಉಳಿದ ಮಕ್ಕಳ ಆರೋಗ್ಯ ಸ್ಥಿರವಾಗಿದೆ ಎಂದು ವಿಮ್ಸ್ ನಿರ್ದೇಶಕ ಡಾ.ಗಂಗಾಧರ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ