Belagavi NewsBelgaum News

*ಬೆಳಗಾವಿಯಲ್ಲಿ ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಚೆನ್ನಮ್ಮ ಮೃತ್ತದಲ್ಲಿ ಎಂಇಎಸ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.‌

ನಾಡದ್ರೋಹಿ ಎಂಇಎಸ್ ನಿಷೇಧಕ್ಕೆ ಕರ್ನಾಟಕ ಬಂದ್ ಕರೆ ಹಿನ್ನೆಲೆ ಬಂದ್ ಬೆಂಬಲಿಸಿ ಕನ್ನಡ ಪರ ಸಂಘಟನೆಗಳಿಂದ ಪ್ರವಾಸಿ ಮಂದಿರದಿಂದ ಚೆನ್ನಮ್ಮ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಎಂಇಎಸ್, ಶಿವಸೇನೆ ನಿಷೇಧಕ್ಕೆ ಒತ್ತಾಯಿಸಿ ಬೊಬ್ಬೆ ಹಾಕಿ ಹೋರಾಟಗಾರರು ಆಕ್ರೋಶ ಹೋರ ಹಾಕಿದರು. ಕನ್ನಡ ವಿರೋಧಿ ಶಾಸಕರು, ಸಚಿವರ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

Home add -Advt

ಈ ವೇಳೆ ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಚೆನ್ನಮ್ಮ ವೃತ್ತ ಬಂದ್ ಮಾಡಿ ಪ್ರತಿಭಟನೆಗೆ ಮುಂದಾಗಿದ್ದ ಹೋರಾಟಗಾರರನ್ನು ಬಲವಂತವಾಗಿ ವಶಕ್ಕೆ ಪಡೆದರು.

Related Articles

Back to top button