Belagavi NewsBelgaum NewsKannada NewsKarnataka NewsPolitics

*ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಮಾನ ಹರಾಜು ಹಾಕಿ, ಕಾಂಗ್ರೆಸ್ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಇಂದು ಜಿಲ್ಲಾ ಬಿಜೆಪಿ ಕಾರ್ಯಕರ್ತರು ಆರ್ ಟಿ ಓ ಸರ್ಕಲ್ ಬಳಿ ಇರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಇದಕ್ಕೂ ಮುನ್ನ ಬಿಜೆಪಿ ಕಾರ್ಯಕರ್ತರು ಚನ್ನಮ್ಮ ವೃತ್ತದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ ಮಾಡಿದಾಗ ಅವರನ್ನು ವಶಕ್ಕೆ ಪಡೆದ ಪೊಲೀಸರು ಠಾಣೆಗೆ ಕರೆದುಕೊಂಡು ಹೋದರು. ಸುಮಾರು 100ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಈರಣ್ಣ ಅಂಗಡಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಪ್ರಧಾನ ಕಾರ್ಯದರ್ಶಿ ಆನಂದ ಅತ್ತುಗೋಳ, ಪ್ರಶಾಂತ್ ಅಮ್ಮಿನಭಾವಿ, ಪ್ರಮೋದ್ ನುಗ್ಗಾನಟ್ಟಿ, ಸದಾಶಿವ ಪಾಟೀಲ್, ಪ್ರಸಾದ್ ದೇವರಮನಿ, ಮಹಾಂತೇಶ ವಕ್ಕುಂದ,ಶಿಲ್ಪಾ ಕೆಕರೆ, ಶ್ವೇತಾ ಜಗದಾಳೆ ಹಾಗೂ ಅನೇಕರು ಇದ್ದರು.

Home add -Advt

Related Articles

Back to top button