Belagavi NewsBelgaum NewsKannada NewsKarnataka NewsPolitics

*ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ  ಆಚರಣೆಯ ಕಾರ್ಯಕ್ರಮದ ವೇಳೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ವಂದೇ ಮಾತರಂ ಗೀತೆಗೆ ಅಗೌರವ ಸೂಚಿಸುವ ಮೂಲಕ ಗೀತೆಯನ್ನು ಅರ್ಧಕ್ಕೆ ನಿಲ್ಲಿಸುವಂತೆ ವರ್ತಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟಿಸಲಾಯಿ.

ರವಿವಾರ ಬೆಳಗಾವಿ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ನಾಯಕರ ವಿರದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.‌

Home add -Advt

ನಂತರ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೋಲಿಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈರಣ್ಣಾ ಅಂಗಡಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಅತ್ತುಗೋಳ, ಗುರು ಹಿರೇಮಠ, ಮಹಾನಗರ ಅಧ್ಯಕ್ಷ ಮಹಾದೇವ ಧರೆಣ್ಣವರ, ಮುಖಂಡರಾದ ಮುರುಘೇಂದ್ರಗೌಡ ಪಾಟೀಲ, ಪ್ರಶಾಂತ್ ಅಮ್ಮಿನಭಾವಿ, ಪ್ರಸಾದ್ ದೇವರಮನಿ, ದಿಗ್ವಿಜಯ್ ಸಿದ್ನಾಳ, ಕೃಷ್ಣಾ ಪಾಟೀಲ, ಪಂಡಿತ ಓಗಲೆ, ಬಾಬು ಪಾಟೀಲ, ರಾಜಶೇಖರ ಡೋಣಿ ಹಾಗೂ ಬಿಜೆಪಿ ಯುವ ಘಟಕದ ಕಾರ್ಯಕರ್ತರು ಉಪಸ್ಥಿತರಿದ್ದರು. 

Related Articles

Back to top button