Belagavi NewsBelgaum NewsCrimeKannada NewsKarnataka NewsNationalPolitics

*ಕುಖ್ಯಾತ ಗ್ಯಾಂಗ್ ನ್ನು ಬಂಧಿಸಿದ ಪೊಲೀಸರು: 21 ವಾಹನಗಳ ಜಪ್ತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಂತರರಾಜ್ಯ ಹಾಗೂ ಅಂತರ್ ಜಿಲ್ಲಾ ಮಟ್ಟದಲ್ಲಿ ವಾಹನ ಕಳ್ಳತನ ನಡೆಸುತ್ತಿದ್ದ ಕುಖ್ಯಾತ ಗ್ಯಾಂಗ್ ನ್ನು ಬೆಳಗಾವಿ ಪೊಲೀಸರು ಬಂಧಿಸಿ, ಸುಮಾರು 95.50 ಲಕ್ಷ ಮೌಲ್ಯದ 21 ವಾಹನಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ತನಿಖೆ ನಡೆಸಿದ ಪೊಲೀಸರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಹಾಗೂ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ

ರಾಜ್ಯದ ವಿವಿಧ ನಗರಗಳಿಗೆ ರಾತ್ರಿ ವೇಳೆ ತೆರಳಿ ಮೊದಲು ವಿವಿಧ ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡಿ, ನಂತರ ಅದೇ ವಾಹನಗಳನ್ನು ಬಳಸಿ ವಿವಿಧ ಸ್ಥಳಗಳಲ್ಲಿ ನಿಲ್ಲಿಸಿದ್ದ ನಾಲ್ಕು ಚಕ್ರದ ವಾಹನಗಳನ್ನು ಕಳ್ಳತನ ಮಾಡುತ್ತಿದ್ದರು ಎಂಬುದು ಪತ್ತೆಯಾಯಿತು.

ಕಳ್ಳತನ ಮಾಡಿದ ವಾಹನಗಳನ್ನು ಬೇರೆ ಬೇರೆ ಕೇ ಮಾರಾಟ ಮಾಡಿ ವಿಲೇವಾರಿ ಮಾಡಲಾಗುತ್ತಿತ್ತು ಎಂಬುದು ವಿಚಾರಣೆಯಲ್ಲಿ ಬಹಿರಂಗವಾಗಿದೆ. ಪೊಲೀಸರು ಆರೋಪಿಗಳಿಂದ ಒಟ್ಟು 21 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

Home add -Advt

ಪ್ರಕರಣಕ್ಕೆ ಸಂಬಂಧಿಸಿದ ಇನ್ನೂ ಕೆಲ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರಿಹಾಳ ಪೊಲೀಸ್ ಠಾಣೆಯ ಸಿಪಿಐ ಐ.ಆರ್. ಪಟ್ಟಣಶೆಟ್ಟಿ, ಪಿಎಸ್ಐ ಮಂಜುನಾಥ ಹುಲಕುಂದ, ಪಿಎಸ್ಐ ಚಂದ್ರಶೇಖರ, ಸಿಸಿಬಿ ವಿಭಾಗದ ಪಿಎಸ್ಐ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಅವರ ಕಾರ್ಯಕ್ಕೆ ನಗರ ಪೊಲೀಸ್ ಆಯುಕ್ತರು ಮತ್ತು ಡಿಸಿಪಿ ಅವರು ತಂಡದ ಕಾರ್ಯವನ್ನು ಪ್ರಶಂಸಿಸಿದ್ದಾರೆ. 

Related Articles

Back to top button