CrimeKannada NewsKarnataka NewsLatest

*ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಮೌಲ್ವಿಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಹಿಂದು ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರಿನ ಕೆ.ಎಸ್. ಲೇಔಟ್ ಠಾಣೆ ಪೊಲೀಸರು ಹಾಸನದಲ್ಲಿ ಬಂಧಿಸಿದ್ದಾರೆ. ಹಾಸನದಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಪುನೀತ್ ರನ್ನು ಸದ್ಯ ಬೆಂಗಳೂರಿಗೆ ಕರೆತರಲಾಗುತ್ತಿದೆ.

ಮುಸ್ಲಿಂ ಮುಖಂಡ ಹಾಗೂ ವಕ್ತಾರ ಅಬ್ದುಲ್ ರಜಾಕ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಮೌಲ್ವಿಗಳ ವಿರುದ್ಧ ಅವಹೇಳನಕಾರಿ ಪದಬಳಕೆ ಮಾಡಿ ಕೋಮು ಸೌಹಾರ್ದತೆಗೆ ಧಕ್ಕೆ ತರಲು ಯತ್ನಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು.

ಬಂಧನದ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಹಾಸನದಿಂದ ರಾಜಧಾನಿ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಠಾಣೆಗೆ ಕರೆತಂದ ಬಳಿಕ ದೂರಿನಲ್ಲಿರುವ ಅಂಶಗಳು ಹಾಗೂ ವೈರಲ್ ಆಗಿರುವ ವಿಡಿಯೋ ಹೇಳಿಕೆಗಳ ಕುರಿತು ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ತೀವ್ರ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button