Belagavi NewsBelgaum NewsCrimeKannada NewsKarnataka NewsNationalPolitics

*ಇಬ್ಬರು ಅಪ್ರಾಪ್ತ ಬೈಕ್ ಕಳ್ಳರನ್ನು ಬಂಧಿಸಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೈಕ್ ಕಳ್ಳತನ ಪ್ರಕರಣವನ್ನು ತನಿಖೆ ನಡೆಸಿದ ಬೆಳಗಾವಿ ಉದ್ಯಮಬಾಗ ಪೊಲೀಸರು ಇಬ್ಬರು ಅಪ್ರಾಪ್ತ ಬೈಕ್ ಕಳ್ಳರನ್ನು ಬಂಧಿಸಿ, ಎರಡು ಬಕ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಉದ್ಯಮಬಾಗ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಮಹಾಂತೇಶ ವಿ ಹೊಸಪೇಟಿ ನೇತೃತ್ವದಲ್ಲಿ ಇಬ್ಬರು ಅಪ್ರಾಪ್ತ ಬಾಲಕರನ್ನು ವಿಚಾರಣೆಗೊಳಪಡಿಸಿದಾಗ, ಬಾಲಕರು ಬೈಕ್‌ಗಳನ್ನು ಕಳ್ಳತನ ಮಾಡಿದ್ದರ ಬಗ್ಗೆ ಒಪ್ಪಿಕೊಂಡಿರುತ್ತಾರೆ.

Related Articles
Home add -Advt

ಈ ಪ್ರಕರಣದಲ್ಲಿ ಒಟ್ಟು 65,000 ರೂ ಮೌಲ್ಯದ 2 ಬೈಕ್ ವಶಪಡಿಸಿಕೊಂಡು ಬಾಲಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಿ, ತನಿಖೆ ಮುಂದುವರೆಸಲಾಗಿದೆ.

ಪ್ರಕರಣ ಬೇಧಿಸಿದ ಪಿಐ, ಪಿಎಸ್‌ಐ, ಮತ್ತು ಸಿಬ್ಬಂದಿಯವರ ಕಾರ್ಯವನ್ನು ಪೊಲೀಸ್ ಆಯುಕ್ತರು, ಬೆಳಗಾವಿ ನಗರ ಹಾಗೂ ಡಿಸಿಪಿ ರವರುಗಳು ಶ್ಲಾಘಿಸಿರುತ್ತಾರೆ.

Related Articles

Back to top button